ಬೆಂಗಳೂರು, ಮೇ 6: ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷವೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಜ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ಈ ವರ್ಷವೂ ವಿದ್ಯಾರ್ಥಿನಿಯರೇ ಮೆಲುಗೈ ಸಾಧಿಸಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ, ಮಂಡ್ಯ ದ್ವಿತೀಯ, ಉಡುಪಿ ಜಿಲ್ಲೆ ತೃತೀಯ, ಬೀದರ್ ಜಿಲ್ಲೆಗೆ ಕೊನೆಯ ಸ್ಥಾನ ಗಳಿಸಿದೆ. ಒಟ್ಟು 77.47ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 622 ಅಂಕ ಗಳಿಸಿದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದು, 35 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಪಡೆದಿದೆ ಎಂದರು.
ಎಸೆಸೆಲ್ಸಿಯಲ್ಲಿ ಅನುದಾನಿತ ಶಾಲೆಗಳಲ್ಲಿ 86.23 ವಿದ್ಯಾರ್ಥಿಗಳು ಉತ್ತೀಣ್ರಾಗಿದ್ದಾರೆ. ಸರಕಾರಿ ಶಾಲೆಗಳಲ್ಲಿ 77.71ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು.
0 comments:
Post a Comment