ಬೆಂಗಳೂರು, ಮೇ 5: ವಿಧಾನಸಭಾ ಚುನಾವಣೆಯ ಮತದಾನದ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರದ ಗದ್ದುಗೆ ಏರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಸ್ಪಷ್ಟಪಡಿಸಿವೆ.
ಪ್ರಸ್ತುತ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 110-118, ಬಿಜೆಪಿ 47-51, ಜೆಡಿಎಸ್ 32-35, ಕೆಜೆಪಿ 20-23, ಇತರೆ 7-11 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಖಾಸಗಿ ಸಂಸ್ಥೆಗಳು ನಡೆಸಿರುವ ಸಮೀಕ್ಷೆಗಳು ತಿಳಿಸಿವೆ.
ಹಳೇ ಮೈಸೂರು ಭಾಗದಲ್ಲಿನ 68 ಕ್ಷೇತ್ರಗಳಲ್ಲಿ ಕಾಂಗ್ರೆಸ್-38, ಬಿಜೆಪಿ-13, ಜೆಡಿಎಸ್-13, ಇತರೆ-4, ಮಧ್ಯ ಕರ್ನಾಟಕದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್-13, ಬಿಜೆಪಿ-4, ಜೆಡಿಎಸ್-3, ಕೆಜೆಪಿ-5 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ.
ಮಲೆನಾಡಿನ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್-9, ಬಿಜೆಪಿ-4, ಜೆಡಿಎಸ್-8, ಕೆಜೆಪಿ-4, ಕರಾವಳಿ ಭಾಗದ 13 ಕ್ಷೇತ್ರಗಳಲ್ಲಿ ಕಾಂಗ್ರೆಸ್-9, ಬಿಜೆಪಿ-3, ಇತರೆ-1, ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎನ್ನಲಾಗಿದೆ.
ಮುಂಬೈ ಕರ್ನಾಟಕದ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್-26, ಬಿಜೆಪಿ-14, ಜೆಡಿಎಸ್-2, ಕೆಜೆಪಿ-5 ಹಾಗೂ ಇತರೆ-3, ಹೈದರಾಬಾದ್ ಕರ್ನಾಟಕದ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್-15, ಬಿಜೆಪಿ-7, ಜೆಡಿಎಸ್-6, ಕೆಜೆಪಿ-9, ಇತರರು 3 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.
ಎಸ್.ಎಂ.ಕೃಷ್ಣ ನೇತೃತ್ವದಲ್ಲಿ ಕಾಂಗ್ರೆಸ್ 1999ರಲ್ಲಿ ನಿಚ್ಚಳ ಬಹುಮತದೊಂದಿಗೆ ಸರಕಾರ ರಚನೆ ಮಾಡಿದ ಬಳಿಕ ಯಾವುದೆ ರಾಜಕೀಯ ಪಕ್ಷಕ್ಕೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪಷ್ಟ ಬಹುಮತಗಳಿಸಲು ಸಾಧ್ಯವಾಗಿರಲಿಲ್ಲ. 2004ರಲ್ಲಿ ನಡೆದ ಚುನಾವಣೆಯಲ್ಲಿ ಅತಂತ್ರ ವಿಧಾನಸಭಾ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂತು. ನಂತರ, ನಡೆದ ನಾಟಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರಕಾರ ಪತನಗೊಂಡು, ಜೆಡಿಎಸ್-ಬಿಜೆಪಿ ಸರಕಾರ ರಚನೆಯಾಯಿತು.
ಆದರೆ, 2008ರಲ್ಲಿ ನಡೆದ ಚುನಾವಣೆಯಲ್ಲಿ 110 ಸ್ಥಾನಗಳನ್ನು ಪಡೆದ ಬಿಜೆಪಿ ಪಕ್ಷೇತರರ ಸಹಕಾರದಿಂದ ಸರಕಾರ ರಚನೆ ಮಾಡಿತ್ತು. ಇದೀಗ 9 ವರ್ಷಗಳ ಬಳಿಕ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಸಾಧ್ಯತೆಗಳನ್ನು ಚುನಾವಣೋತ್ತರ ಸಮೀಕ್ಷೆಗಳು ಪುಷ್ಠಿಕರಿಸಿವೆ.

0 comments:
Post a Comment