ಎಲೆಕ್ಟ್ರಾನಿಕ್ ಮತಯಂತ್ರಗಳಿಗೆ ಯಾವುದೇ ಬಗೆಯ ಪೂಜೆ ಮಾಡುವಂತಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ.
ಚುನಾವಣೆಯ ಸಂದರ್ಭದಲ್ಲಿ ಮತದಾನ ಪ್ರಾರಂಭಕ್ಕೂ ಮುನ್ನ ಮತಯಂತ್ರಗಳಿಗೆ ಪೂಜೆ ನೆರವೇರಿಸುವುದು ಈ ಹಿಂದಿನ ಚುನಾವಣೆಗಳಲ್ಲಿ ಕಂಡುಬಂದಿದ್ದು, ಇಂತಹ ವಿಧಿ ವಿಧಾನಗಳಿಗೆ ಚುನಾವಣೆ ನಿಯಮಗಳಲ್ಲಿ ಅವಕಾಶವಿಲ್ಲ. ಆದ್ದರಿಂದ ಈ ಬಾರಿಯ ಮತದಾನ ಸಂದರ್ಭದಲ್ಲಿ ಮತಯಂತ್ರಗಳಿಗೆ ಯಾವುದೇ ಅಭ್ಯರ್ಥಿಗಳು, ಏಜೆಂಟರು, ಸಿಬ್ಬಂದಿಗಳು ಯಾವುದೇ ಬಗೆಯ ಪೂಜೆ ನೆರವೇರಿಸುವುದನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಅವರು ತಿಳಿಸಿದ್ದಾರೆ.
0 comments:
Post a Comment