ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಗ್ರಾಮದ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ರಂಗ ಶಿಕ್ಷಣ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈ ಶಿಕ್ಷಣದ ಅವಧಿಯು ಒಂದು ವರ್ಷದ್ದಾಗಿದ್ದು, ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಆದರೆ ಪದವೀಧರರಿಗೆ ಆದ್ಯತೆ ನೀಡಲಾಗುವುದು, ತರಬೇತಿ ಅವಧಿಯಲ್ಲಿ ಊಟ, ವಸತಿ ವ್ಯವಸ್ಥೆ ನೀಡಲಾಗುತ್ತದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರು ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ.
ಒಂದು ವರ್ಷದ ರಂಗ ಶಿಕ್ಷಣದಲ್ಲಿ ಭಾರತೀಯ ರಂಗಭೂಮಿ, ಕನ್ನಡ ರಂಗಭೂಮಿ, ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಕಳರಿ, ಕಥಕ್ಕಳಿ, ಯಕ್ಷಗಾನ, ಕಂಸಾಳೆ, ವೀರಗಾಸೆ, ಪ್ರಸಾಧನ, ಬೆಳಕಿನ ವಿನ್ಯಾಸ, ರಂಗವಿನ್ಯಾಸ, ವಸ್ತ್ರ ವಿನ್ಯಾಸ ಮುಂತಾದ ಕಾರ್ಯಾಗಾರಗಳ ಜೊತೆಗೆ ಕಾವ್ಯ, ಸಿನೇಮಾ ಮತ್ತು ಚಿತ್ರಕಲೆ ಕುರಿತಾದ ಕಮ್ಮಟಗಳು ನಡೆಯುತ್ತವೆ, ಒಂದು ವರ್ಷದಲ್ಲಿ ನಾಲ್ಕರಿಂದ ಐದು ನಾಟಕಗಳ ಅಭ್ಯಾಸ ಹಾಗೂ ಪ್ರದರ್ಶನ ನಡೆಯುತ್ತದೆ.
ಆಸಕ್ತರು ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿ-೫೭೭೫೧೫, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ ಕರ್ನಾಟಕ ಈ ವಿಳಾಸಕ್ಕೆ ಬರೆದು ಪ್ರವೇಶ ಪತ್ರಗಳನ್ನು ತರಿಸಿಕೊಳ್ಳಬಹುದು. ಜುಲೈ-೦೧ ಸೋಮವಾರ ಮತ್ತು ೦೨ ಮಂಗಳವಾರ ಬೆಳಿಗ್ಗೆ ೧೦.೦೦ ಗಂಟೆಗೆ ಸಾಣೇಹಳ್ಳಿಯ ರಂಗಪ್ರಯೋಗ ಶಾಲೆಯಲ್ಲಿ ಸಂದರ್ಶನ ನಡೆಯಲಿದೆ. ಎರಡು ದಿನಗಳ ಕಾಲ ಸಂದರ್ಶನವು ನಡೆಯಲಿದ್ದು, ಮೊದಲ ದಿನ ಪ್ರಾಯೋಗಿಕ, ಎರಡನೇ ದಿನ ಮೌಖಿಕ ಪರೀಕ್ಷೆಗಳು ಇರುತ್ತವೆ. ಜುಲೈ-೧೫ ರಿಂದ ತರಗತಿಗಳು ಪ್ರಾರಂಭವಾಗುತ್ತವೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ನಟರಾಜ ಹೊನ್ನವಳ್ಳಿ, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ ದೂರವಾಣಿ ಸಂಖ್ಯೆ: ೦೮೧೯೯-೨೪೩೭೭೨, ೯೪೮೧೩೪೫೪೫೦, ೯೪೪೮೩೯೮೧೪೪ ಇವರನ್ನು ಸಂಪರ್ಕಿಸಬಹುದಾಗಿದೆ .
0 comments:
Post a Comment