ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ರೆಗ್ಯುಲೇಷನ್ ಆಕ್ಟ್-೧೯೯೫ ಜಾರಿ ಸಂಬಂಧ ಕೇಬಲ್ ನೆಟ್‌ವರ್ಕ್ ಆಪರೇಟರ್‌ಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಉದ್ದೇಶಿಸಲಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿನ ಎಲ್ಲ ಕೇಬಲ್ ನೆಟ್‌ವರ್ಕ್ ಸಂಸ್ಥೆಯವರು ತಮ್ಮ ಕೇಬಲ್‌ಗೆ ಸಂಬಂಧಿಸಿದ ಮಾಹಿತಿ ಹಾಗೂ ದಾಖಲೆಯನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ.
ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ರೆಗ್ಯುಲೇಷನ್ ಆಕ್ಟ್ ಜಾರಿ ಸಂಬಂಧ ಈಗಾಗಲೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿಯನ್ನು ರಚಿಸಲಾಗಿದ್ದು, ಜಿಲ್ಲಾಧಿಕಾರಿಗಳು ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಜಿಲ್ಲೆಯಲ್ಲಿರುವ ಎಲ್ಲ ಕೇಬಲ್ ನೆಟ್‌ವರ್ಕ್ ಸಂಸ್ಥೆ/ಆಪರೇಟರ್‌ಗಳು ತಮ್ಮ ನೆಟ್‌ವರ್ಕ್‌ನ ಹೆಸರು, ವಿಳಾಸ, ನೋಂದಣಿ ಸಂಖ್ಯೆ ಮತ್ತಿತರ ಸಂಪೂರ್ಣ ವಿವರಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಒದಗಿಸಬೇಕು. ನಿಗದಿತ ನಮೂನೆಯನ್ನು ಜಿಲ್ಲಾ ವಾರ್ತಾಧಿಕಾರಿಗಳು, ವಾರ್ತಾ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಂದ ಪಡೆದು, ಭರ್ತಿ ಮಾಡಿದ ವಿವರಗಳೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ವಾರ್ತಾಧಿಕಾರಿಗಳು, ಕೊಪ್ಪಳ ಇವರಿಗೆ ಜೂ. ೧೨ ರ ಒಳಗಾಗಿ ಸಲ್ಲಿಸಬೇಕು. ನಿಗದಿತ ಅವಧಿಯೊಳಗೆ ಮಾಹಿತಿ ಮತ್ತು ದಾಖಲೆಗಳನ್ನು ಸಲ್ಲಿಸದ ಕೇಬಲ್ ನೆಟ್ ವರ್ಕ್‌ಗಳನ್ನು ಅನಧಿಕೃತವೆಂದು ಪರಿಗಣಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
0 comments:
Post a Comment