PLEASE LOGIN TO KANNADANET.COM FOR REGULAR NEWS-UPDATES

  ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಜಾರಿಗೊಳಿಸಲಾಗಿರುವ ಸಕಾಲ ಅಧಿನಿಯಮ ಜಾರಿ ಕುರಿತಂತೆ ಕೊಪ್ಪಳದ ಜಿಲ್ಲಾ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜೂ. ೧೩ ಮತ್ತು ೧೪ ರಂದು ಎರಡು ದಿನಗಳ ಕಾಲ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿ ಜರುಗಿತು.
   ತರಬೇತಿ ಕಾರ್ಯಗಾರವನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಉದ್ಘಾಟಿಸಿದರು.  ಪ್ರಸಕ್ತ ಸಾಲಿನ ಸಕಾಲ ಸೇವೆಗಳ ಅಧಿನಿಯಮ ಕುರಿತಾದ  ಕಾರ್ಯಾಗಾರದಲ್ಲಿ ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಣಣ ಪಂಚಾಯತ, ವಾಣಿಜ್ಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ  ತಾಲೂಕ ಪಂಚಾಯತ ಮತ್ತು ಗ್ರಾಮ ಪಂಚಾಯತ ಅಧಿಕಾರಿಗಳು ಸೇರಿದಂತೆ ೪೦ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು ಎಂದು ಜಿಲ್ಲಾ ಆಡಳಿತ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ   ತಿಳಿಸಿದ್ದಾರೆ.  

Advertisement

0 comments:

Post a Comment

 
Top