PLEASE LOGIN TO KANNADANET.COM FOR REGULAR NEWS-UPDATES

 : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿವರ್ಷದಂತೆ ೨೦೧೨ ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು, ಬಹುಮಾನಕ್ಕೆ ಸಲ್ಲಿಸುವ ಕೃತಿಗಳು ೨೦೧೨ ರ ಜನವರಿ ೧ ರಿಂದ ೨೦೧೨ ರ ಡಿಸೆಂಬರ್ ೩೧ ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು, ಕೃತಿಯ ತಾಂತ್ರಿಕ ಪುಟದಲ್ಲಿ ಪ್ರಥಮ ಮುದ್ರಣ ೨೦೧೨ ಎಂದು ಮುದ್ರಿತವಾಗಿರಬೇಕು. 
ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ), ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ಆತ್ಮಕತೆ (ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನ), ಸಾಹಿತ್ಯ ವಿಮರ್ಶೆ (ಸಾಹಿತ್ಯ ಚರಿತ್ರೆ, ಸಾಹಿತ್ಯ ತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ) (ಪಿ.ಶ್ರೀನಿವಾಸರಾವ್ ದತ್ತಿನಿಧಿ ಬಹುಮಾನ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ (ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿಂಗ್, ವೈದ್ಯ, ಭೂ, ಖಗೋಳ, ಗೃಹ ವಿಜ್ಞಾನ, ಪರಿಸರ-ಇತ್ಯಾದಿ), ಮಾನವಿಕಗಳು (ಇತಿಹಾಸ, ರಾಜಕೀಯ ಶಾಸ್ತ್ರ, ಸಮಾಜ ಶಾಸ್ತ್ರ, ಮಾನವಶಾಸ್ತ್ರ, ಮನಃಶಾಸ್ತ್ರ, ಭಾಷಾಶಾಸ್ತ್ರ, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥಭಂಡಾರ ವಿಜ್ಞಾನ, ಸಮೂಹ ಸಂವಹನ, ಧಾರ್ಮಿಕ, ದಾರ್ಶನಿಕ), ಸಂಶೋಧನೆ (ಕನ್ನಡ ಭಾಷೆ ಮತ್ತು ಸಂಸ್ಕೃತಿಗಳಿಗೆ ಸಂಬಂಧಿಸಿದ ಸಂಶೋಧನೆ), ಅನುವಾದ-೧ (ಕಾದಂಬರಿ, ಕಾವ್ಯ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನಚರಿತ್ರೆ-ಇತ್ಯಾದಿ ಸೃಜನಶೀಲ ಕೃತಿಗಳು), ಅನುವಾದ-೨ (ಶಾಸ್ತ್ರ ಸಾಹಿತ್ಯ, ಸಾಹಿತ್ಯ ವಿಮರ್ಶೆ-ಇತ್ಯಾದಿ ಸೃಜನೇತರ ಕೃತಿಗಳು), ಸಂಕೀರ್ಣ (ಯಾವುದೇ ಪ್ರಕಾರಕ್ಕೆ ಹೊಂದಿಕೊಳ್ಳದ ವಿಶಿಷ್ಟ ಕೃತಿಗಳನ್ನು ಈ ಪ್ರಕಾರದಲ್ಲಿ ಬಹುಮಾನಕ್ಕೆ ಪರಿಗಣಿಸಲಾಗುವುದು.), ಲೇಖಕರ ಮೊದಲ ಸ್ವತಂತ್ರ ಕೃತಿಗೆ ಬಹುಮಾನ (ಮಧುರಚೆನ್ನ ದತ್ತಿನಿಧಿ ಬಹುಮಾನ), ಕನ್ನಡದಿಂದ ಇಂಗ್ಲೀಷಿಗೆ ಅನುವಾದ (ಅಮೆರಿಕನ್ನಡ ದತ್ತಿನಿಧಿ ಬಹುಮಾನ).
ಬಹುಮಾನಕ್ಕಾಗಿ ಕಳುಹಿಸಲ್ಪಡುವ ಕೃತಿಗಳು ಮರು ಮುದ್ರಣವಾದ ಪುಸ್ತಕಗಳಾಗಿರಬಾರದು, ಜಾನಪದ ಕೃತಿಗಳಾಗಿರಬಾರದು, ಪಿ.ಎಚ್.ಡಿ. ಪದವಿಗಾಗಿ ಸಿದ್ದಪಡಿಸಿದ ಸಂಶೋಧನಾ ಗ್ರಂಥಗಳಾಗಿರಬಾರದು, ಪಠ್ಯ ಪುಸ್ತಕಗಳಾಗಿರಬಾರದು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳಾಗಿರಬಾರದು, ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳಾಗಿರಬಾರದು, ಒಂದೇ ಪ್ರಕಾರದಲ್ಲಿ ಎರಡು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಅದೇ ಪ್ರಕಾರದಲ್ಲಿ ಮತ್ತೆ ಪರಿಗಣಿಸುವುದಿಲ್ಲ.
ಈ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ಒಂದೊಂದು ಸಾದಾ ಪ್ರತಿಯನ್ನು ರಿಜಿಸ್ಟಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ರಿಜಿಸ್ಟರ್‍ಡ್ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿ ೨೦೧೨ ರ ಜುಲೈ ೧೫ ರೊಳಗೆ ತಲುಪಿಸಬೇಕು.  ಕಳುಹಿಸಲ್ಪಡುವ ಕೃತಿಯು ೧೮ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು. ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್www.karnatakasahithyaacademy.org ನಲ್ಲಿ ಸಂಪರ್ಕಿಸಬಹುದಾಗಿದೆ .

Advertisement

0 comments:

Post a Comment

 
Top