PLEASE LOGIN TO KANNADANET.COM FOR REGULAR NEWS-UPDATES

  ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ೩೭೧(ಜೆ) ಕಲಂ ತಿದ್ದುಪಡಿ ಜಾರಿಗೊಳಿಸಲು ನಿಯಮಗಳನ್ನು ರೂಪಿಸುವ ಸಂಬಂಧ ಸಚಿವ ಸಂಪುಟದ ಉಪಸಮಿತಿಯು ಹೈ-ಕ ಪ್ರದೇಶದ ಹೋರಾಟ ಸಮಿತಿ, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಲಿಖಿತ ರೂಪದ ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು ಜುಲೈ ೦೩ ರಂದು ಬೆಳಿಗ್ಗೆ ೧೦ ಗಂಟೆಗೆ ಹೊಸಪೇಟೆಯ ಅಮರಾವತಿ ಪ್ರವಾಸಿ ಮಂದಿರ ಬಳಿಯ ಸಿದ್ದಿಪ್ರಿಯ ಕಲ್ಯಾಣ ಮಂಟಪದಲ್ಲಿ ಸಭೆ ಆಯೋಜಿಸಲಾಗಿದೆ.
  ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ೩೭೧(ಜೆ) ಕಲಂ ತಿದ್ದುಪಡಿ ಜಾರಿಗೊಳಿಸಿ, ಇಲ್ಲಿನ ಜನರಿಗೆ ಸಾರ್ವಜನಿಕ ಹುದ್ದೆಗಳಲ್ಲಿ ಮೀಸಲಾತಿ ಹಾಗೂ ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಮೀಸಲಾತಿಯನ್ನು ಕಲ್ಪಿಸಬೇಕಾಗಿರುತ್ತದೆ.   
  ಹೈ-ಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ನಿಯಮಾವಳಿ ರೂಪಿಸಲು ಅಭಿಪ್ರಾಯ/ಸಲಹೆ ನೀಡಬಯಸುವ ಕೊಪ್ಪಳ ಜಿಲ್ಲೆಯ ಹೈ-ಕ ಪ್ರದೇಶ ಹೋರಾಟ ಸಮಿತಿ, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಲಿಖಿತ ಅಭಿಪ್ರಾಯ/ಸಲಹೆಗಳ ಒಂದು ಪ್ರತಿಯನ್ನು ಕಡ್ಡಾಯವಾಗಿ ಜು. ೦೨ ರಂದು ಸಂಜೆ ೦೫ ಗಂಟೆಯೊಳಗೆ ಕೊಪ್ಪಳ ಅಪರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು.  ಅಂತಹವರಿಗೆ ಮಾತ್ರ ಜು. ೦೩ ರಂದು ಬೆಳಿಗ್ಗೆ ೧೦ ಗಂಟೆಗೆ ಹೊಸಪೇಟೆಯಲ್ಲಿ ಜರುಗುವ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ತಮ್ಮ ಲಿಖಿತ ಅಭಿಪ್ರಾಯ ಮತ್ತು ಸಲಹೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಪ್ರಭಾರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ  ತಿಳಿಸಿದ್ದಾರೆ.

Advertisement

0 comments:

Post a Comment

 
Top