PLEASE LOGIN TO KANNADANET.COM FOR REGULAR NEWS-UPDATES

 ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಮತ್ತು ಘಟ್ಟದಕೋರೆ), ಮೂಡಲಪಾಯ, ಯಕ್ಷಗಾನ ಗೊಂಬೆಯಾಟ (ಸೂತ್ರದ ಮತ್ತು ತೊಗಲುಗೊಂಬೆ), ಶ್ರೀಕೃಷ್ಣಪಾರಿಜಾತ, ಸಣ್ಣಾಟ, ದೊಡ್ಡಾಟ ಇತ್ಯಾದಿ ಕಲಾ ಪ್ರಕಾರಗಳಲ್ಲಿ ೨೦೧೧ ಮತ್ತು ೨೦೧೨ ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (ಜನೇವರಿ ಯಿಂದ ಡಿಸೆಂಬರ್ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕಾಗಿ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.  
ಆಯ್ಕೆಯಾದ ಪುಸ್ತಕಕ್ಕೆ ರೂ. ೫,೦೦೦/- ರೂ.ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ (ಸಂಗೀತ, ಆಹಾರ್‍ಯ, ಅಭಿನಯ ಇತ್ಯಾದಿ), ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕಾಗಿ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು, ಸಂಪಾದಿತ, ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು, ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು. 
ಬಹುಮಾನಕ್ಕಾಗಿ ಪುಸ್ತಕಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ, ಬಯಲಾಟ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ಜುಲೈ ೧೫ ರೊಳಗೆ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಳುಹಿಸಬೇಕು. ಹೆಚ್ಚಿನ ವಿವರಗಳನ್ನು ಹಾಗೂ ಅರ್ಜಿ ನಮೂನೆಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಪ್ಪಳ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ. 

Advertisement

0 comments:

Post a Comment

 
Top