ಜಿಲ್ಲೆಯಲ್ಲಿ ರೋಗವಾಹಕ ಆಶ್ರಿತ ರೋಗಗಳು ಹರಡುವಿಕೆ ಮತ್ತು ನಿಯಂತ್ರಣ ಕುರಿತಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅರಿವು ಮೂಡಿಸುವ ಸಭೆಯನ್ನು ಜೂ.೦೭ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ಏರ್ಪಡಿಸಲಾಗಿದೆ.
ಜಿಲ್ಲೆಯಲ್ಲಿನ ರೋಗವಾಹಕ ಆಶ್ರಿತ ರೋಗಗಳಾದ ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ರೋಗಗಳ ಪರಿಸ್ಥಿತಿಯ ಪರಾಮರ್ಷೆ, ಹರಡುವಿಕೆ ಹಾಗೂ ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮತ್ತು ಪ್ರಾತ್ಯಕ್ಷಿತೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಸಂಬಂಧಪಟ್ಟ ಎಲ್ಲಾ ಇಲಾಖೆ ಅಧಿಕಾರಿಗಳು ಸಭೆಗೆ ಹಾಜರಾಗಬೇಕು. ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ.ಅಭಿವೃದ್ದಿ ಅಧಿಕಾರಿಗಳನ್ನು ಒಳಗೊಂಡು ಸಂಬಂಧಿಸಿದ ತಾಲೂಕ ತಹಶೀಲ್ ಕಛೇರಿಯಲ್ಲಿರುವ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಜೂ.೦೭ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಹಾಜರಿದ್ದು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ತಿಳಿಸಿದ್ದಾರೆ.
0 comments:
Post a Comment