PLEASE LOGIN TO KANNADANET.COM FOR REGULAR NEWS-UPDATES

  ರಂಜಾನ್ ಮಾಸದಲ್ಲಿ ಪ್ರತಿ ದಿನ ಉಪವಾಸ ಆಚರಣೆ ಮಾಡುವವರಿಗೆ ಪ್ರಾರ್ಥನೆಗೆ ಅನುಕೂಲವಾಗುವಂತೆ ತರಗತಿ ಅಥವಾ ಕಚೇರಿಯಿಂದ ತೆರಳಲು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಡಿಡಿಪಿಐ ಜಿ.ಹೆಚ್. ವೀರಣ್ಣ ಅವರು ತಿಳಿಸಿದ್ದಾರೆ.
  ಜಿಲ್ಲೆಯ ಸರ್ಕಾರಿ ಪ್ರಾಥಮಿಕ, ಅನುದಾನಿತ, ಅನುದಾನರಹಿತ, ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರು ರಂಜಾನ್ ಮಾಹೆಯಲ್ಲಿ ಉಪವಾಸ ವೃತವನ್ನು ಕೈಗೊಳ್ಳುವುದರಿಂದ ಅಂತಹವರಿಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ರಂಜಾನ ಮಾಹೆಯಲ್ಲಿ ಪ್ರತಿ ದಿವಸ ಉಪವಾಸ ಆಚರಣೆ ಮಾಡುವವರಿಗೆ ಮಾತ್ರ ಮಧ್ಯಾಹ್ನ ೩.೧೫ ಗಂಟೆಗೆ ತರಗತಿಯಿಂದ/ಕಛೇರಿಯಿಂದ ಬಿಡಲು ಅನುಮತಿ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ  ತಿಳಿಸಿದ್ದಾರೆ.

Advertisement

0 comments:

Post a Comment

 
Top