ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಘಟಕದೊಳಗಿನ ವರ್ಗಾವಣೆ ಕೌನ್ಸಿಲಿಂಗ್ ಜು. ೦೮ ರಿಂದ ಪ್ರಾರಂಭವಾಗಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ಕೊಪ್ಪಳ ಡಿಡಿಪಿಐ ಕಚೇರಿಗೆ ಭೇಟಿ ನೀಡಿ, ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ನಡೆಯುವ ಕುರಿತು ಸಂಪೂರ್ಣ ಮಾಹಿತಿ ಪಡೆದ ಜಿ.ಪಂ. ಸಿಇಓ ಡಿ.ಕೆ. ರವಿ ಅವರು ಪ್ರಕ್ರಿಯೆಯ ಪಾರದರ್ಶಕತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಜು.೦೮ ರಂದು ಆದ್ಯತಾ ಪಟ್ಟಿಯ ಕ್ರಮ ಸಂಖ್ಯೆ ೦೧ ರಿಂದ ೨೫೦ ರವರೆಗೆ ಕೌನ್ಸಿಲಿಂಗ್ ಜರುಗಿತು. ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಸ್ಥಳ ಆಯ್ಕೆ ಮಾಡಿಕೊಂಡ ಶಿಕ್ಷಕರಿಗೆ ಸ್ಥಳದಲ್ಲೇ ವರ್ಗಾವಣೆ ಆದೇಶ ಪತ್ರ ವಿತರಣೆ ಮಾಡಿದರು. ಡಿಡಿಪಿಐ ಜಿ.ಹೆಚ್. ವೀರಣ್ಣ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ, ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭು ಕಿಡದಾಳ, ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾದಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪ್ರಯುಕ್ತ ಡಿಡಿಪಿಐ ಕಚೇರಿ ಆವರಣದಲ್ಲಿ ನೂರಾರು ಶಿಕ್ಷಕರು ಜಮಾವಣೆಗೊಂಡಿದ್ದರು. ಜು.೦೯ ರಂದು ಆದ್ಯತಾ ಪಟ್ಟಿಯ ಕ್ರಮ ಸಂಖ್ಯೆ ೨೫೧ ರಿಂದ ೫೦೦ ರವರೆಗೆ. ಹಾಗೂ ಜು. ೧೦ ರಂದು ಆದ್ಯತಾ ಪಟ್ಟಿಯ ಕ್ರಮ ಸಂಖ್ಯೆ ೫೦೧ ರಿಂದ ೬೨೧ ರವರೆಗೆ (ಕೊನೆಯ ವರೆಗೆ) ಕೌನ್ಸಿಲಿಂಗ್ ನಡೆಯಲಿದೆ. ಜು.೧೦ ರಂದು ಸ.ಪ್ರಾ.ಶಾಲಾ ಮುಖ್ಯ ಶಿಕ್ಷಕರು (ಓಉಊಒ) ಆದ್ಯತಾ ಪಟ್ಟಿಯ ಕ್ರಮ ಸಂಖ್ಯೆ ೦೧ ರಿಂದ ೦೫ ರವರೆಗೆ. ಸ.ಪ್ರಾ.ಶಾಲಾ ಮುಖ್ಯ ಶಿಕ್ಷಕರು (ಊPS ಊಒ) ಆದ್ಯತಾ ಪಟ್ಟಿಯ ಕ್ರಮ ಸಂಖ್ಯೆ ೦೧ ರಿಂದ ೬೪ ರವರೆಗೆ. ಸ.ಪ್ರಾ.ಶಾಲಾ ವಿಶೇಷ ಶಿಕ್ಷಕರು (ಒUSIಅ/ಅಖಂಈಖಿ/ಆಖಂWIಓಉ/Pಇಖಿ) ಆದ್ಯತಾ ಪಟ್ಟಿಯ ಕ್ರಮ ಸಂಖ್ಯೆ ೦೧ ರಿಂದ ೩೬ ರವರೆಗೆ ಕೌನ್ಸಲಿಂಗ್ ಜರುಗಲಿದೆ.
0 comments:
Post a Comment