ಮುನಿರಾಬಾದಿನ ಕಾಡಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ೯೭ನೇ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ತುಂಗಭದ್ರಾ ಜಲಾಶಯದಲ್ಲಿ ಸುಮಾರು ೩೪ ಟಿಎಂಸಿ ಪ್ರಮಾಣದಷ್ಟು ಹೂಳು ತುಂಬಿದ್ದು, ಈ ಸಮಸ್ಯೆಯ ನಿವಾರಣೆಗೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಎಲ್ಲ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ನೀರಾವರಿ ತಜ್ಞರು, ಪ್ರಮುಖ ರೈತ ಮುಖಂಡರುಗಳೊಂದಿಗೆ ರಾಜ್ಯ ಜಲಸಂಪನ್ಮೂಲ ಸಚಿವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಶೀಘ್ರವೇ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ವ್ಯಕ್ತವಾಗುವ ತೀರ್ಮಾನಕ್ಕೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಮಾತನಾಡಿ, ಯಾವುದೇ ಕೈಗಾರಿಕೆಗಳು ಅಕ್ರಮವಾಗಿ ಜಲಾಶಯದಿಂದ ನೀರು ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ. ಈಗಾಗಲೆ ಅಕ್ರಮವಾಗಿ ಪಂಪ್‌ಸೆಟ್ ಮೂಲಕ ಕೈಗಾರಿಕೆಗಳಿಗೆ ನೀರು ಪೂರೈಕೆ ಮಾಡಿಕೊಳ್ಳುವುದನ್ನು ಪತ್ತೆ ಹಚ್ಚಿ, ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಶಾಸಕರುಗಳಾದ ರಾಘವೇಂದ್ರ ಹಿಟ್ನಾಳ್, ಬಾದರ್ಲಿ ಹಂಪನಗೌಡ, ತುಂಗಭದ್ರಾ ಯೋಜನಾ ವೃತ್ತದ ಮುಖ್ಯ ಅಭಿಯಂತರ ಮಲ್ಲಿಕಾರ್ಜುನ, ಅಧೀಕ್ಷಕ ಅಭಿಯಂತರ ಎಸ್.ಎಚ್. ಮಂಜಪ್ಪ ಮುಂತಾದವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಕಾಡಾ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ, ಸಂಸದರುಗಳಾದ ಎಸ್. ಫಕೀರಪ್ಪ, ಜೆ. ಶಾಂತಾ, ಶಾಸಕರುಗಳಾದ ಕೆ. ರಾಘವೇಂದ್ರ ಹಿಟ್ನಾಳ್, ಇಕ್ಬಾಲ್ ಅನ್ಸಾರಿ, ಹಂಪನಗೌಡ ಬಾದರ್ಲಿ, ಪ್ರತಾಪಗೌಡ ಪಾಟೀಲ್, ಹಂಪಯ್ಯ ನಾಯಕ್, ಡಾ. ಶಿವರಾಜ ಪಾಟೀಲ್, ಅನಿಲ್ ಲಾಡ್, ಶ್ರೀರಾಮುಲು, ಆನಂದಸಿಂಗ್, ಟಿ. ಹವಾಲ್ದಾರ್, ಬಿ.ಎಂ. ನಾಗರಾಜ್, ತುಕಾರಾಂ, ಮೃತ್ಯುಂಜಯ ಜಿನಗ (ವಿಧಾನಪರಿಷತ್) ತುಂಗಭದ್ರಾ ಯೋಜನಾ ವೃತ್ತದ ಮುಖ್ಯ ಅಭಿಯಂತರ ಮಲ್ಲಿಕಾರ್ಜುನ, ಅಧೀಕ್ಷಕ ಅಭಿಯಂತರ ಎಸ್.ಎಚ್. ಮಂಜಪ್ಪ, ಸೇರಿದಂತೆ ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಉನ್ನತ ಅಧಿಕಾರಿಗಳು, ವಿವಿಧ ಗಣ್ಯರು ಭಾಗವಹಿಸಿದ್ದರು.
0 comments:
Post a Comment