ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮವು ಮೈಸೂರು ಸಿಲ್ಕ್ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಜು. ೧೭ ರಿಂದ ೨೦ ರವರೆಗೆ ಗಂಗಾವತಿಯ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದೆ.
ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನೆಯನ್ನು ಜು. ೧೭ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ನೆರವೇರಿಸುವರು. ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮವು ಎರಡನೆ ಬಾರಿಗೆ ಗಂಗಾವತಿಯಲ್ಲಿ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಹಮ್ಮಿಕೊಂಡಿದ್ದು, ಗಂಗಾವತಿಯ ಆನೆಗುಂದಿ ರಸ್ತೆಯಲ್ಲಿರುವ ಸರೋಜಮ್ಮ ಕಲ್ಯಾಣಮಂಟಪದಲ್ಲಿ ಮಾರಾಟ ಮೇಳ ನಡೆಯಲಿದೆ. ವರಮಹಾಲಕ್ಷ್ಮಿ ಪೂಜೆ ಹಬ್ಬದ ಸಡಗರವನ್ನು ಮೈಸೂರು ಸಿಲ್ಕ್ ರೇಷ್ಮೆ ಖರೀದಿಸುವುದರೊಂದಿಗೆ ಆಚರಿಸಲು ಇದು ಉತ್ತಮ ಅವಕಾಶವಾಗಿದ್ದು, ಸರ್ಕಾರಿ ನೌಕರರಿಗೆ ಮೊತ್ತವನ್ನು ೧೦ ಕಂತುಗಳಲ್ಲಿ ಪಾವತಿಸುವ ಅವಕಾಶ ಕಲ್ಪಿಸಲಾಗಿದೆ. ಅರ್ಹ ಸರ್ಕಾರಿ ನೌಕರರು ತಿಂಗಳ ವೇತನದಲ್ಲಿ ಕಂತು ಕಡಿತಗೊಳಿಸುವ ಅಥವಾ ಮುಂದಿನ ದಿನಾಂಕಗಳನ್ನು ನಮೂದಿಸಿದ ೧೦ ಚೆಕ್‌ಗಳನ್ನು ನೀಡುವ ಮೂಲಕ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಭಾರತದಲ್ಲಿ ದೊರೆಯುವ ರೇಷ್ಮೆ ವಸ್ತ್ರಗಳಿಗಿಂತ "ಮೈಸೂರ್ ಸಿಲ್ಕ್" ಹೇಗೆ ವಿಭಿನ್ನವಾಗಿದೆ? ಎಂದರೆ! ಇದು ಹಳೇ ಮೈಸೂರು ಪ್ರದೇಶದಲ್ಲಿ ದೊರೆಯುವ ಪ್ರಾಕೃತಿಕ ರೇಷ್ಮೆ ಗೂಡಿನಿಂದ ದೊರೆಯುವ ಅತ್ಯುತ್ತಮ ರೇಷ್ಮೆಯಿಂದ ಮಾಡಲ್ಪಟ್ಟಿದೆ. ಇದು ಬಟ್ಟೆಗಳಿಗೆ ವಿಶಿಷ್ಟವಾದ ಹೊಳಪು ಮತ್ತು ಭೌಗೋಳಿಕ ಸುವಾಸನೆಯನ್ನು ನೀಡಿದೆ. ಸಾಂಪ್ರದಾಯಿಕ ರೀತಿಯ ಉತ್ಪಾದನೆ, ಬಟ್ಟೆಯಲ್ಲಿ ಅಳವಡಿಸಲಾಗಿರುವ ಹುರಿ ಮಾಡುವ ವಿಧಾನ, ಮೈಸೂರ್ ಸಿಲ್ಕ್ ಬಟ್ಟೆಯು ಭಾರತದಲ್ಲಿ ದೊರೆಯುವ ಕ್ರೇಪ್ ಸಿಲ್ಕ್ ಬಟ್ಟೆಗಳಲ್ಲಿಯೇ ಅತ್ಯುತ್ತಮವಾಗಿರುವುದಲ್ಲದೆ ಬಟ್ಟೆಗೆ ವಿಶೇಷ ಮೆರುಗನ್ನು ನೀಡಿದೆ.
ಇದೀಗ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆಯಲಿದ್ದು, ಜು. ೧೭ ರಿಂದ ೨೦ ರವರೆಗೆ ಪ್ರತಿದಿನ ಬೆಳಿಗ್ಗೆ ೧೦ ಗಂಟೆಯಿಂದ ರಾತ್ರಿ ೮ ಗಂಟೆಯವರೆಗೆ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರು ಈ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ತಿಳಿಸಿದೆ.
0 comments:
Post a Comment