PLEASE LOGIN TO KANNADANET.COM FOR REGULAR NEWS-UPDATES


 ಇದೇ ಆಗಸ್ಟ್ ೧೫ ರಂದು ೬೭ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭ ನಗರದ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ  ಬೆಳಿಗ್ಗೆ ೯.೦೦ ಗಂಟೆಗೆ ಜರುಗಲಿದೆ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ಸಂಸದ ಶಿವರಾಮಗೌಡ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ತಾ.ಪಂ. ಅಧ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ, ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ ಅವರು ಭಾಗವಹಿಸುವರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ ೮.೦೦ ಗಂಟೆಗೆ ವಿವಿಧ ಸ್ಥಬ್ದ ಚಿತ್ರಗಳ ಮೆರವಣಿಗೆಯು ಕೊಪ್ಪಳ ಮಿನಿ ವಿಧಾನಸೌಧ ಆವರಣದಿಂದ ಹೊರಟು, ಧ್ವಜಾರೋಹಣ ನಡೆಯುವ ಜಿಲ್ಲಾ ಕ್ರೀಡಾಂಗಣಕ್ಕೆ ತಲುಪಲಿದೆ. ಅಲ್ಲದೆ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ., ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಗೃಹರಕ್ಷಕ ದಳಗಳಿಂದ ಪಥ ಸಂಚಲನ ಮತ್ತು ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ, ಶಾಲಾ ಮಕ್ಕಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನೆರವೇರಲಿದೆ.  ಅಂದು ಸಾಯಂಕಾಲ ೬.೦೦ ರಿಂದ ೯.೦೦ ರವರೆಗೆ ನಗರದ ಸಾರ್ವಜನಿಕ ಮೈದಾನದಲ್ಲಿ ಸಮೂಹ ನೃತ್ಯಗಳು, ಭರತನಾಟ್ಯ, ಜಾನಪದ ನೃತ್ಯ, ದೇಶಭಕ್ತಿ ಗೀತೆಗಳು ಹಾಗೂ ಸಮೂಹ ಗೀತೆಗಳು ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ .

Advertisement

0 comments:

Post a Comment

 
Top