PLEASE LOGIN TO KANNADANET.COM FOR REGULAR NEWS-UPDATES

        ಕೊಪ್ಪಳ : ಕಳೆದ ಅವಧಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದಿಂದ ಸುಮಾರು ೨೪ ಸಾವಿರ ಜನರಿಗೆ ಸದಸ್ಯತ್ವ ನೀಡುವ ಮೂಲಕ ದೇಶದಲ್ಲಿಯೇ ಕೊಪ್ಪಳ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕ ೨ ನೇ ಸ್ಥಾನ ಪಡೆದಿತ್ತು. ಈ ಅವಧಿಯ ಸದಸ್ಯತ್ವ ಅಭಿಯಾನ ಗುರುವಾರದಿಂದ ಸೆಪ್ಟೆಂಬರ್ ೫ರ ವರೆಗೆ ನಡೆಯಲಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ಹೇಳಿದರು.
       ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸಿದ ಅವರು,
ಈ ಅವಧಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸುಮಾರು ೫೦ ಸಾವಿರ ಜನರಿಗೆ ಯುವ ಕಾಂಗ್ರೆಸ್ ಸದಸ್ಯತ್ವ ನೀಡುವ ಗುರಿ ಹೊಂದಲಾಗಿದೆ. ೧೮ ರಿಂದ ೩೫ ವರ್ಷದೊಳಗಿನ ಯುವಕರು ಯುವ ಕಾಂಗ್ರೆಸ್ ಘಟಕಕ್ಕೆ ಸದಸ್ಯತ್ವ ಪಡೆಯಬಹುದು ಎಂದರು.
         ಉತ್ತರಾಖಂಡ ನೆರೆ ಪರಿಹಾರ ನೀಡುವಲ್ಲಿಯೂ ಕೊಪ್ಪಳ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಘಟಕವು ದೇಶದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ೭,೧೮,೮೦೦ ರುಪಾಯಿಗಳನ್ನು ಸಾರ್ವಜನಕರಿಂದ ನೆರೆ ಸಂತ್ರಸ್ತರ ನೋವಿಗೆ ನಮ್ಮ ಘಟಕ ಸ್ಪಂದಿಸಿದೆ. ನೆರವು ನೀಡುವಂತೆ ಕೋರಿ ಸಾರ್ವಜನಿಕರ ಬಳಿ ಹೋದಾಗ ಉತ್ತಮ ಸ್ಪಂದನೆ ಸಿಕ್ಕಿದ್ದರಿಂದ ನಾವು ದೇಶದಲ್ಲಿ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಯಿತು ಎಂದು ಅವರು ಹರ್ಷ ವ್ಯಕ್ತಪಡಿಸಿದರು.
            ಜಿಲ್ಲೆಯಲ್ಲಿ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರದ ೮ ವಿಧಾನಸಭಾ ಕ್ಷೇತ್ರಗಳಲ್ಲಿ ಇರುವ ಹಲವು ಸಮಸ್ಯೆಗಳ ಬಗ್ಗೆ ಯುವ ಕಾಂಗ್ರೆಸ್ ಮೊದಲಿನಿಂದಲೂ ಹೋರಾಟ ನಡೆಸುತ್ತಾ ಬಂದಿದೆ. ಈಗಾಗಲೇ ಹಲವು ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆಯಲಾಗಿದ್ದು, ತುಂಗಭದ್ರಾ ಜಲಾಶಯದ ಹೂಳಿಗೆ ಮುಕ್ತಿ ನೀಡುವ ಕುರಿತು ಚಿಂತನೆ ನಡೆದಿದ್ದು ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆದಿದೆ. ಬರುವ ಬೇಸಿಗೆ ವೇಳೆಗೆ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ ಸರಕಾರವನ್ನು ಎಚ್ಚರಿಸುವ ಕೆಲಸ ಮಾಡಲಾಗುತ್ತದೆ ಎಂದರು.
            ಈ ಸಲ ನಡೆಯಲಿರುವ ಲೋಕಸಭಾ ಚುನಾವಣೆಗೆ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಆಕಾಂಕ್ಷಿ ತಾವಾಗಿದ್ದು ರಾಹುಲ್‌ಗಾಂಧಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ. ತಮ್ಮನ್ನು ಬಿಟ್ಟು ಬೇರೆ ಯಾರಿಗೆ ಟಿಕೇಟ್ ಸಿಕ್ಕರೂ ಅವರ ಗೆಲುವಿಗೆ ಶ್ರಮಿಸುತ್ತೇನೆ ಎಂದು ಅವರು ಹೇಳಿದರು.
            ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್‌ನ ಲೋಕಸಭಾ ರಿಟರ್ನಿಂಗ್ ಆಫೀಸರ್ ರಾಹುಲ್, ನಗರಸಭೆ ಸದಸ್ಯ ಮುತ್ತುರಾಜ್ ಕುಷ್ಟಗಿ., ರಾಮಣ್ಣ ಹದ್ದಿನ್, ನಗರಸಭೆಯ ಮಾಜಿ ಸದಸ್ಯರಾದ ಕಾಟನ್ ಪಾಷಾ, ಮಾನ್ವಿ ಪಾಷಾ, ಶರಣಪ್ಪ ಸಜ್ಜನ್ ಇದ್ದರು.

Advertisement

0 comments:

Post a Comment

 
Top