ಜಿಲ್ಲಾ ಪಂಚಾಯತಿ ಅಧ್ಯಕ್ಷ ಟಿ. ಜನಾರ್ಧನ ಹುಲಗಿ ಅವರು ಗಂಗಾವತಿ ತಾಲೂಕು ಚಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸೋಮನಾಳ ಗ್ರಾಮದಲ್ಲಿ ಆ. ೧೯ ರಂದು ಏರ್ಪಡಿಸಲು ಉದ್ದೇಶಿಸಲಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆ. ೨೬ಕ್ಕೆ ಮುಂದೂಡಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಿ.ಪಂ. ಅಧ್ಯಕ್ಷ ಜನಾರ್ಧನ ಹುಲಿಗಿ ಅವರು, ಆ. ೧೯ ರಂದು ಸೋಮನಾಳ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗಿತ್ತು. ಈಗಾಗಲೆ ಸಾರ್ವಜನಿಕರಿಂದ ಸುಮಾರು ೧೪೦ ಅರ್ಜಿಗಳು ಸ್ವೀಕೃತಗೊಂಡಿವೆ. ತಮಗೆ ಅನಾರೋಗ್ಯ ಸಮಸ್ಯೆಯ ಕಾರಣದಿಂದ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಹ ಸೂಕ್ತ ಪರಿಹಾರಕ್ಕಾಗಿ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಗ್ರಾಮ ವಾಸ್ತವ್ಯವನ್ನು ಸೋಮನಾಳ ಗ್ರಾಮದಲ್ಲಿಯೇ ಆ. ೧೯ ರ ಬದಲಿಗೆ ಆ. ೨೬ ಕ್ಕೆ ನಡೆಸಲಾಗುವುದು ಎಂದು ಜಿ.ಪಂ. ಅಧ್ಯಕ್ಷ ಟಿ. ಜನಾರ್ಧನ ಹುಲಿಗಿ ತಿಳಿಸಿದ್ದಾರೆ.
0 comments:
Post a Comment