PLEASE LOGIN TO KANNADANET.COM FOR REGULAR NEWS-UPDATES

 ವಾರ್ತಾ ಇಲಾಖೆಯು ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧೀಜಿಯವರ ೧೪೫ನೇ ಜನ್ಮ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಅ. ೦೨ ರಂದು ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಂಡಿದೆ.
         ಮಹಾತ್ಮಾ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಅಂದು ’ರಘುಪತಿ ರಾಘವ ರಾಜಾರಾಂ’ ಗೀತ ಗಾಯನದ ನಂತರ, ವಾರ್ತಾ ಇಲಾಖೆಯಿಂದ ಪ್ರಕಟಿಸಲಾಗಿರುವ ’ನಮ್ಮ ಗಾಂಧಿ ತಾತ’ ಕಿರು ಹೊತ್ತಿಗೆ ಹಾಗೂ ಜನಪದ ಗಾಂಧಿ ವಿಶೇಷಾಂಕ ಸಂಚಿಕೆ  ಬಿಡುಗಡೆ ಮಾಡಲಾಗುವುದು.  ಇದೇ ಸಂದರ್ಭದಲ್ಲಿ ಗಾಂಧೀಜಿಯವರ ಜೀವನ ಚರಿತ್ರೆಯ ಕುರಿತ ೩೦ ನಿಮಿಷಗಳ ಅವಧಿಯ ಸಾಕ್ಷ್ಯ ಚಿತ್ರ ಪ್ರದರ್ಶಿಸಲಾಗುವುದು.  ಕಾರ್ಯಕ್ರಮದ ಅಂಗವಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ ಆಗಿರುವ ಶರಣಬಸವರಾಜ ಬಿಸರಳ್ಳಿ ಅವರು ’ಮಹಾತ್ಮಾ ಗಾಂಧೀಜಿಯವರ ವಿಚಾರಧಾರೆಗಳು’ ಕುರಿತಂತೆ ವಿಶೇಷ ಉಪನ್ಯಾಸ ನೀಡುವರು.
         ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, ಉಪವಿಭಾಗಾಧಿಕಾರಿ ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್. ವೀರಣ್ಣ ಅವರು ಭಾಗವಹಿಸುವರು.  ಕಾರ್ಯಕ್ರಮದಲ್ಲಿ ಎಲ್ಲ ಸ್ವಾತಂತ್ರ್ಯ ಹೋರಾಟಗಾರರು, ಜನಪ್ರತಿನಿಧಿಗಳು, ಗಣ್ಯರು ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.  ಅಲ್ಲದೆ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್
 ತಿಳಿಸಿದ್ದಾರೆ.

Advertisement

0 comments:

Post a Comment

 
Top