ಶಿಕ್ಷಣ ಇಲಾಖೆಯು ಜಿಲ್ಲೆಯಲ್ಲಿನ ಐತಿಹಾಸಿಕ ಮಹತ್ವ ಮುಂತಾದ ವಿಷಯ ಕುರಿತಂತೆ ಶೈಕ್ಷಣಿಕ ಪ್ರಕೃತಿ ಅಧ್ಯಯನ ಹಾಗೂ ಸಂರಕ್ಷಣೆ ಮಾಹಿತಿ ನೀಡುವಂತಹ ಕಾರ್ಯಕ್ರಮವನ್ನು ಕ್ಷೇತ್ರ ಸಮನ್ವಯ ಅಧಿಕಾರಿಗಳು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು, ದೈಹಿಕ ಶಿಕ್ಷಕರಿಗೆ ವಿಶೇಷ ಕಾರ್ಯಕ್ರಮವನ್ನು ಸೆ. ೨೭ ಕ್ಕೆ ಮುಂದೂಡಲಾಗಿದೆ.
ಈ ಕಾರ್ಯಕ್ರಮವನ್ನು ಸೆ. ೨೬ ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಸೆ. ೨೭ ಕ್ಕೆ ಮುಂದೂಡಲಾಗಿದೆ. ಅಂದು ಬೆಳಿಗ್ಗೆ ೯ ಗಂಟೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದದಿಂದ ಒಂದು ದಿನದ ಶೈಕ್ಷಣಿಕ ಪ್ರಕೃತಿ ಅಧ್ಯಯನ ಹಾಗೂ ಸಂರಕ್ಷಣೆ, ಐತಿಹಾಸಿಕ ಅಶೋಕ ಶಿಲಾಶಾಸನ ಹಾಗೂ ಸ್ಮಾರಕಗಳ ವೀಕ್ಷಣೆ ಮತ್ತು ಮಾಹಿತಿ ನೀಡಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರಿಂದ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿನ ಐತಿಹಾಸಿಕ ಮಹತ್ವಗಳ ಕುರಿತಂತೆ ವಿವರಣೆ ನೀಡಲು ಅನುಕೂಲವಾಗಲಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯ ಅಧಿಕಾರಿಗಳು, ದೈಹಿಕ ಶಿಕ್ಷಣ ಪರಿವೀಕ್ಷಕರು, ಶಿಕ್ಷಣ ಸಂಯೋಜಕರು, ಎಲ್ಲಾ ವಲಯ ಸಂಪನ್ಮೂಲ ವ್ಯಕ್ತಿ (ಬಿಆರ್‌ಪಿ)ಗಳು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು (ಸಿಆರ್‌ಪಿ), ಸರ್ಕಾರಿ ಹಾಗೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಭಾಗವಹಿಸುವರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಹೆಚ್. ವೀರಣ್ಣ ತಿಳಿಸಿದ್ದಾರೆ.
0 comments:
Post a Comment