PLEASE LOGIN TO KANNADANET.COM FOR REGULAR NEWS-UPDATES

 
ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ೫೭ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಸಮಾರಂಭ ನ. ೦೧ ರಂದು ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣವನ್ನು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಟಿ. ಜನಾರ್ಧನ ಹುಲಗಿ, ಸಂಸದ ಶಿವರಾಮಗೌಡ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ತಾ.ಪಂ. ಅಧ್ಯಕ್ಷ ಮುದೆಗೌಡ ಮಾಲಿ ಪಾಟೀಲ್, ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ ಮುಂತಾದ ಗಣ್ಯರು ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ ೭.೦೦ ಗಂಟೆಗೆ ನಾಡ ದೇವತೆ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಯು ಕೊಪ್ಪಳ ಮಿನಿ ವಿಧಾನಸೌಧ ಆವರಣದಿಂದ ಹೊರಟು, ಧ್ವಜಾರೋಹಣ ನಡೆಯುವ ಜಿಲ್ಲಾ ಕ್ರೀಡಾಂಗಣಕ್ಕೆ ತಲುಪಲಿದೆ. ಅಲ್ಲದೇ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ., ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಗೃಹರಕ್ಷಕ ದಳಗಳಿಂದ ಪಥ ಸಂಚಲನ ಮತ್ತು ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ಜರುಗಲಿದೆ. ಶಾಲಾ ಮಕ್ಕಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ನೆರವೇರಲಿದೆ. ಅಲ್ಲದೇ ಅಂದು ಸಾಯಂಕಾಲ ೬.೦೦ ರಿಂದ ೯.೦೦ ರವರೆಗೆ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಸಮೂಹ ನೃತ್ಯಗಳು, ಭರತನಾಟ್ಯ, ಜಾನಪದ ನೃತ್ಯ, ದೇಶಭಕ್ತಿ ಗೀತೆಗಳು ಹಾಗೂ ಸಮೂಹ ಗೀತೆಗಳು ಸೇರಿದಂತೆ ಅನೇಕ ಕಾರ್ಯಕ್ರಮಗಳು ಜರುಗಲಿವೆ.

Advertisement

0 comments:

Post a Comment

 
Top