ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕೊಪ್ಪಳ ನಗರದಲ್ಲಿ ನೂತನ ನಗರ (ಕಿಷ್ಕಿಂದಾ ನಗರ ಸಾರಿಗೆ) ಬಸ್‌ಗಳ ಉದ್ಘಾಟನೆ ಹಾಗೂ ಅಪಘಾತ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿಪದಕ ವಿತರಣೆ ಸಮಾರಂಭ ಅ.೦೮ ರಂದು ಮಧ್ಯಾಹ್ನ ೩.೦೦ ಗಂಟೆಗೆ ಕೇಂದ್ರಿಯ ಬಸ್ ನಿಲ್ದಾಣದ ಆವರಣದಲ್ಲಿ ಜರುಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೆರವೇರಿಸಲಿದ್ದಾರೆ. ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಜ್ಯೋತಿ ಬೆಳಗಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ಸಂಸದ ಶಿವರಾಮಗೌಡ ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ತಾ.ಪಂ.ಅಧ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ನಗರಸಭೆ ಉಪಾಧ್ಯಕ್ಷ ಅಮ್ಜದ್ ಪಟೇಲ್, ತಾ.ಪಂ.ಉಪಾಧ್ಯಕ್ಷೆ ಸುಜಾತಾ ಮಾಲಿಪಾಟೀಲ್ ಸೇರಿದಂತೆ ಜಿ.ಪಂ., ತಾ.ಪಂ, ನಗರಸಭೆ ಹಾಗೂ ಚುನಾಯಿತ ಸರ್ವ ಸದಸ್ಯರು ಆಗಮಿಸಲಿದ್ದಾರೆ ಎಂದು ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಪಿ. ಮಿನುಲ್ಲಾ ಸಾಹೇಬ್ ಅವರು ತಿಳಿಸಿದ್ದಾರೆ.
ಅ.೦೮ ರಂದು ಹಿಟ್ನಾಳ ಬಸ್ ನಿಲ್ದಾಣದ ಅಡಿಗಲ್ಲು ಸಮಾರಂಭ
ಕೊಪ್ಪಳ ಅ.೦೭(ಕರ್ನಾಟಕ ವಾರ್ತೆ): ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದಿಂದ ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ನೂತನ ಬಸ್ ನಿಲ್ದಾಣದ ಅಡಿಗಲ್ಲು ಸಮಾರಂಭ ಅ.೦೮ ರಂದು ಮಧ್ಯಾಹ್ನ ೨.೦೦ ಗಂಟೆಗೆ ಹಿಟ್ನಾಳ್‌ನಲ್ಲಿ ಜರುಗಲಿದೆ.
ಕಾರ್ಯಕ್ರಮದ ಶಿಲಾನ್ಯಾಸವನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೆರವೇರಿಸಲಿದ್ದಾರೆ. ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಜ್ಯೋತಿ ಬೆಳಗಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ಸಂಸದ ಶಿವರಾಮಗೌಡ ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ತಾ.ಪಂ.ಅಧ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ಜಿ.ಪಂ.ಸದಸ್ಯ ಕೆ.ರಮೇಶ ಹಿಟ್ನಾಳ, ತಾ.ಪಂ.ಸದಸ್ಯೆ ವಿಶಾಲಾಕ್ಷಮ್ಮ ವಿ.ಮಾಲಿಪಾಟೀಲ್, ಎಪಿಎಂಸಿ ನಿರ್ದೇಶಕ ಶಿವಲಿಂಗಪ್ಪ ತಿಪ್ಪವ್ವನವರ, ಗ್ರಾ.ಪಂ.ಅಧ್ಯಕ್ಷೆ ಸುಮಾ ಶಾಂತರಾಜ ಜೈನ್, ಗ್ರಾ.ಪಂ. ಉಪಾಧ್ಯಕ್ಷ ಕೆ.ಅಕ್ತರ ಅಲಿ ಎಮ್. ಸೇರಿದಂತೆ ಜಿ.ಪಂ., ತಾ.ಪಂ ಹಾಗೂ ಚುನಾಯಿತ ಸರ್ವ ಸದಸ್ಯರು ಭಾಗವಹಿಸುವರು ಎಂದು ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಪಿ.ಮಿನುಲ್ಲಾ ಸಾಹೇಬ್ ಅವರು ತಿಳಿಸಿದ್ದಾರೆ.
0 comments:
Post a Comment