ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅ.೧೮ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಜರುಗಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉ
ಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ಸಂಸದ ಶಿವರಾಮಗೌಡ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ತಾ.ಪಂ.ಅಧ್ಯಕ್ಷ ಮುದೇಗೌಡ ನಿಂಗನಗೌಡ ಮಾಲಿಪಾಟೀಲ್, ವೈದ್ಯಕೀಯ ಶಿಕ್ಷಣ ಇಲಾಖೆಯ ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ, ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಡಿ.ಉದಪುಡಿ ಸೇರಿದಂತೆ ಜಿ.ಪಂ, ತಾ.ಪಂ. ಹಾಗೂ ನಗರಸಭೆ ಸರ್ವ ಸದಸ್ಯರು ಆಗಮಿಸಲಿದ್ದಾರೆ. ವಿಶೇಷ ಉಪನ್ಯಾಸಕರಾಗಿ ಕನಕಗಿರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕ ಡಾ|| ಡಿ.ಕೆ.ಮಾಳೆ ಅವರು ಆಗಮಿಸಲಿದ್ದಾರೆ.
ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೯.೦೦ ಗಂಟೆಯಿಂದ ಶ್ರೀ ಸಿರಸಪ್ಪಯ್ಯನಮಠ ಕೊಪ್ಪಳದಿಂದ ಜವಾಹರ ರಸ್ತೆಯ ಮೂಲಕ ಕನ್ನಡ ಸಾಹಿತ್ಯ ಭವನದವರೆಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಕಾರ್ಯಕ್ರಮ ಜರುಗಲಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶುಭ ಪಿ. ತಿಳಿಸಿದ್ದಾರೆ.
0 comments:
Post a Comment