PLEASE LOGIN TO KANNADANET.COM FOR REGULAR NEWS-UPDATES

 ಕುಷ್ಟಗಿ ಪುರಸಭೆಯಿಂದ ಪ್ರಸಕ್ತ ಸಾಲಿನ ’ನಗರೋತ್ಥಾನ’ ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಯೋಜನೆ ಹಂತ- ೨ ರಲ್ಲಿ ಕೊಪ್ಪಳ ನಗರದ ವಿವಿಧ ವಾರ್ಡ್‌ಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಪೌರಸನ್ಮಾನ ಹಾಗೂ ಭೂಮಿಪೂಜೆ ಸಮಾರಂಭ ನ. ೧೨ ರಂದು ಮಧ್ಯಾಹ್ನ ೧ ಗಂಟೆಗೆ ಕುಷ್ಟಗಿಯಲ್ಲಿ ಜರುಗಲಿದೆ.
  ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ನಗರಸಭೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಭೂಮಿಪೂಜೆ ನೆರವೇರಿಸುವರು.  ಕುಷ್ಟಗಿಯ ಶ್ರೀ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಸಮಾರಂಭ ಜರುಗಲಿದ್ದು, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.  ಸಂಸದ ಶಿವರಾಮಗೌಡ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ಕೆ. ರಾಘವೇಂದ್ರ ಹಿಟ್ನಾಳ್, ವಿಧಾನಪರಿಷತ್ ಸದಸ್ಯರುಗಳಾದ ಹಾಲಪ್ಪ ಆಚಾರ್, ಅಮರನಾಥ ಪಾಟೀಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.  ಪುರಸಭೆ ಅಧ್ಯಕ್ಷೆ ಮಂಜುಳಾ ನಾಗರಾಳ, ಉಪಾಧ್ಯಕ್ಷೆ  ರೇಖಾ ಡಿ. ಡೊಳ್ಳಿನ ಸೇರಿದಂತೆ ಪುರಸಭೆ ಆಡಳಿತ ಮಂಡಳಿಯ ಸರ್ವ ಸದಸ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಪುರಸಭೆ ಮುಖ್ಯಾಧಿಕಾರಿ ಎನ್.ಬಿ. ಪಾಟೀಲ್ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top