PLEASE LOGIN TO KANNADANET.COM FOR REGULAR NEWS-UPDATES

  ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಬಿಂಬಿಸುವಂತಹ ಅತ್ಯುತ್ತಮ ವರದಿಗಾಗಿ ೨೦೧೨ ಮತ್ತು ೨೦೧೩ ನೇ ಸಾಲಿನ ’ಅಭಿಮಾನಿ ಪ್ರಶಸ್ತಿ’ ನೀಡಿ ಗೌರವಿಸಲು ರಾಜ್ಯ ಮಾಧ್ಯಮ ಅಕಾಡೆಮಿಯು ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
  ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆಯು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ ವರದಿಗಳನ್ನು ಬರೆದ ಪತ್ರಕರ್ತರಿಗೆ ಪ್ರತಿವರ್ಷ ಹತ್ತು ಸಾವಿರ ರೂ.ಗಳ ನಗದು ಪ್ರಶಸ್ತಿ ನೀಡಲು ಒಂದು ಲಕ್ಷ ರೂ.ಗಳ ದತ್ತಿಯನ್ನು ಸ್ಥಾಪಿಸಿದ್ದು, ೨೦೧೨ ಮತ್ತು ೨೦೧೩ನೇ ಸಾಲಿನ ಪ್ರಶಸ್ತಿಗಾಗಿ ಆ ಸಾಲಿನಲ್ಲಿ ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಎರಡು ವರ್ಷದ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಮ್ಮ ಸ್ವವಿವರಗಳನ್ನು ಬಿಳಿಹಾಳೆಯಲ್ಲಿ ಬರೆದು ಅಭಿಮಾನಿ ಪ್ರಶಸ್ತಿ-೨೦೧೨, ಅಭಿಮಾನಿ ಪ್ರಶಸ್ತಿ-೨೦೧೩ ಎಂದು ಪ್ರತ್ಯೇಕವಾಗಿ ವರ್ಷವನ್ನು ದಾಖಲಿಸಿ, ಆಯಾ ವರ್ಷದ ಅವಧಿಗೆ ಒಂದು ಲೇಖನವನ್ನು ಮಾತ್ರ ಕಳುಹಿಸಬೇಕು. ಕನ್ನಡ ದೈನಿಕ-ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಬರೆದಿರುವ ವರದಿ/ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶವಿರುತ್ತದೆ. ಲೇಖನ ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ-ವರದಿಗಳನ್ನು ನ.೨೫ ರೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-೫೬೦೦೦೧ ಇವರಿಗೆ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿಗಳು  ತಿಳಿಸಿದ್ದಾರೆ.

Advertisement

0 comments:

Post a Comment

 
Top