ಕೃಷಿ ವಿಶ್ವವಿದ್ಯಾಲಯ ರಾಯಚೂರು, ಕೃಷಿ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ ಗಂಗಾವತಿ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಕೊಪ್ಪಳ ಹಾಗೂ ಕೃಷಿ ಇಲಾಖೆ ಗಂಗಾವತಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗಂಗಾವತಿಯ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನ.೧೧ ಹಾಗೂ ನ.೧೨ ರಂದು ಎರಡು ದಿನಗಳ ಕಾಲ ಕೃಷಿ ಮೇಳ ಹಾಗೂ ತಾಲೂಕು ಕೃಷಿ ಉತ್ಸವ ಕಾರ್ಯಕ್ರಮ ಜರುಗಲಿದೆ.
ದಿವ್ಯ ಸಾನಿಧ್ಯವನ್ನು ಮರಳಿಯ ಶ್ರೀ ಕ್ಷೇತ್ರ ಮರಕುಂಬಿಯ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಲಿದ್ದಾರೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಅವರು ವಹಿಸುವರು. ವಸ್ತು ಪ್ರದರ್ಶನದ ಉದ್ಘಾಟನೆಯನ್ನು ಸಂಸದ ಶಿವರಾಮಗೌಡ ಅವರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಪಾಟೀಲ್, ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರುಗಳಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ನಿ. ಅಧ್ಯಕ್ಷ ಎಂ.ಸತ್ಯನಾರಾಯಣ, ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ್ ಕುಮಾರ ಮೇಲಿನಮನಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಣ್ಣ ಮೂಲಿಮನಿ, ತಾ.ಪಂ.ಅಧ್ಯಕ್ಷೆ ರಾಜೇಶ್ವರಿ ಸುರೇಶ, ತಾಲೂಕ ಕೃಷಿಕ ಸಮಾಜದ ಅಧ್ಯಕ್ಷ ಚನ್ನಪ್ಪ ಮಳಗಿ, ಎಪಿಎಂಸಿ ಅಧ್ಯಕ್ಷ ಕೆ.ಗಂಗಾಧರ ಸ್ವಾಮಿ, ನಗರಸಭೆ ಅಧ್ಯಕ್ಷ ಶಾಮಿದ್ ಮನಿಯಾರ್, ಕೃಷಿಕ ಸಮಾಜದ ರಾಜ್ಯ ಮಟ್ಟದ ಸದಸ್ಯ ಶಂಕ್ರಪ್ಪ ಚವಡಿ, ತಾ.ಪಂ.ಉಪಾಧ್ಯಕ್ಷೆ ಮೈತ್ರಾ ಉಮೇಶ ನಾಯಕ, ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ.ಡಿ.ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಕೆ.ಅಣ್ಣಿಗೇರಿ, ಮುನಿರಾಬಾದ್ ಕಾಡಾ ಆಡಳಿತ ಅಧಿಕಾರಿ ಪ್ರಕಾಶ ಕುಮಾರ ಎಚ್.ಎಸ್. ಭಾಗವಹಿಸುವರು.
0 comments:
Post a Comment