PLEASE LOGIN TO KANNADANET.COM FOR REGULAR NEWS-UPDATES

  ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳ ಕಛೇರಿಯಿಂದ ರಾಜ್ಯ ಅನುದಾನದಡಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಟೋಲ್ ಫ್ರೀ ದೂರವಾಣಿ ಸಂಖ್ಯೆ: ೧೦೯೦ ನ್ನು ಕೊಪ್ಪಳ ಜಿಲ್ಲೆಯಲ್ಲಿ ಪ್ರಾರಂಭಿಸಲಾಗುತ್ತಿದ್ದು, ಸ್ವಯಂ ಸೇವಾ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲು ಅರ್ಹ ಸರಕಾರೇತರ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಸ್ಥೆಗಳು ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಲು ನ. ೧೬ ಕೊನೆಯ ದಿನವಾಗಿರುತ್ತದೆ.  ನಿಗದಿತ ಅರ್ಜಿ ನಮೂನೆ ಹಾಗೂ ಷರತ್ತುಗಳ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ, ಕೊಪ್ಪಳ, ದೂರವಾಣಿ ಸಂಖ್ಯೆ: ೦೮೫೩೯-೨೨೦೫೯೬ ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ .

Advertisement

0 comments:

Post a Comment

 
Top