: ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನ.೦೯ ರಂದು ಮಧ್ಯಾಹ್ನ ೧೨ ಗಂಟೆಗೆ ಒಂದು ದಿನದ ಕಾನೂನು ಕಾಯಾಗಾರ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಜರುಗಲಿಗಿದೆ.
ಕಾರ್ಯಾಗಾರದ ಉದ್ಘಾಟನೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕೊಪ್ಪಳ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಬಿ.ಎಸ್. ಇಂದ್ರಕಲಾ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಕಾಂತ ದಾ.ಬಬಲಾದಿ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ, ಲಾ ಅಕಾಡೆಮಿ ಅಧ್ಯಕ್ಷರು ಹಾಗೂ ರಾಜ್ಯ ವಕೀಲರ ಪರಿಷತ್‌ನ ಸದಸ್ಯರಾದ ಸಂಧ್ಯಾ ಬಿ.ಮಾದಿನೂರ ಅವರು ಭಾಗವಹಿಸುವರು.
ರಾಜ್ಯ ಕಾನೂನು ವಿಶ್ವವಿದ್ಯಾಲಯದ ಡೀನ್ ನಿರ್ದೇಶಕರಾದ ಸಿ.ಎಸ್.ಪಾಟೀಲ್ ಅವರು ಸಂವಿಧಾನದತ್ತ ಮಹಿಳೆಯರ ಹಕ್ಕುಗಳು ಕುರಿತು ಹಾಗೂ ವಕೀಲರಾದ ಹನುಂತರಾವ್ ಅವರು ಕಾನೂನು ಸೇವಾ ಪ್ರಾಧಿಕಾರ ನಡೆದು ಬಂದ ಹಾದಿ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಕಾಂತ ದಾ. ಬಬಲಾದಿ ತಿಳಿಸಿದ್ದಾರೆ.
0 comments:
Post a Comment