PLEASE LOGIN TO KANNADANET.COM FOR REGULAR NEWS-UPDATES

  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮವನ್ನು ಡಿ. ೦೬ ರಂದು ಸಂಜೆ ೫ ಗಂಟೆಗೆ ಕೊಪ್ಪಳದ ಕಿನ್ನಾಳ ರಸ್ತೆಯಲ್ಲಿನ ಪ.ಜಾತಿ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದೆ.
  ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಸಹಾಯಕ ಆಯುಕ್ತ ಪಿ.ಎಸ್. ಮಂಜುನಾಥ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪಿ. ಶುಭಾ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಗವಿಸಿದ್ದೇಶ್ವರ ಮಹಾವಿದ್ಯಾಲಯದ ಉಪನ್ಯಾಸಕ ಡಾ. ಗವಿಸಿದ್ದಪ್ಪ ಹಂದ್ರಾಳ ಅವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸುವರು.  ಇದೇ ಸಂದರ್ಭದಲ್ಲಿ ರಾಮಣ್ಣ ಕಂದಾರಿ ಮತ್ತು ಸಂಗಡಿಗರು ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಗೀತೆಗಳು ಹಾಗೂ ಜಾನಪದ ಗೀತೆಗಳು ಪ್ರಸ್ತುತಪಡಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಟ್ರಪ್ಪ ಚೋರನೂರ   ತಿಳಿಸಿದ್ದಾರೆ.
 

Advertisement

0 comments:

Post a Comment

 
Top