ಮಾಹಿತಿ ಹಕ್ಕು ಕಾಯ್ದೆ-೨೦೦೫ ಜಾರಿಗೆ ಬಂದ ನಂತರ ಆಡಳಿತದಲ್ಲಿ ಪಾರದರ್ಶಕತೆ ಬಂದಿರುವುದರಿಂದ, ಅಕ್ರಮಕ್ಕೆ ಕಡಿವಾಣ ಬಿದ್ದಂತಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಅಭಿಪ್ರಾಯಪಟ್ಟರು.
ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಜಿಲ್ಲಾಡಳಿತ ಮತ್ತು ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಿ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾರ್ವಜನಿಕರಿಗೆ ಜವಾಬ್ದಾರಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಮಾಹಿತಿ ಹಕ್ಕು ಕಾಯ್ದೆ ಜಾರಿಯಾಗಿ ೦೮ ವರ್ಷಗಳೇ ಕಳೆದಿದ್ದರೂ, ಕಾಯ್ದೆ ಕುರಿತು ಸಮರ್ಪಕ ಅರಿವು ಇಲ್ಲದ ಕಾರಣ, ಕಾಯ್ದೆಯ ಅನುಷ್ಠಾನದಲ್ಲಿ ಅಧಿಕಾರಿಗಳು ಹಲವು ಗೊಂದಲಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಮಾಹಿತಿ ಆಯೋಗದಿಂದ ದಂಡ ಮತ್ತು ತೊಂದರೆ ಅನುಭವಿಸುವಂತಾಗಿದೆ. ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಗ್ರ ಅರಿವು ಹೊಂದಿದಾಗ ಮಾತ್ರ, ಇಂತಹ ತೊಂದರೆಯಿಂದ ಮುಕ್ತವಾಗಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ. ಉದಪುಡಿ ಅವರು ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆ ಅಭಿವೃದ್ಧಿಗೆ ಪೂರಕವಾಗಿದ್ದು, ಇದರಿಂದಾಗಿ ಸಾರ್ವಜನಿಕರಲ್ಲಿಯೂ ಸಾಮಾಜಿಕ ಜವಾಬ್ದಾರಿಗೆ ಪ್ರೋತ್ಸಾಹ ನೀಡುವಂತಿದೆ. ಅಧಿಕಾರಿಗಳು ಕಾಯ್ದೆಯ ಬಗ್ಗೆ ಸಂಪೂರ್ಣ ಅರಿವು ಹೊಂದಬೇಕಲ್ಲದೆ, ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಬೇಕು ಎಂದರು.
ಮಾಹಿತಿ ಹಕ್ಕು ಕಾಯ್ದೆ ತರಬೇತಿ ಕಾರ್ಯಕ್ರಮಕ್ಕೆ ಬೋಧಕರಾಗಿ ಆಗಮಿಸಿದ್ದ ಸಿ. ಅಶೋಕ್ ಅವರು ಅವರು ಮಾತನಾಡಿ, ಕಾಯ್ದೆ ಜಾರಿಯ ನಂತರ ದೇಶದಲ್ಲಿ ನಿಜವಾಗಿಯೂ ಅಗತ್ಯವಿರುವ ಮಾಹಿತಿಗಾಗಿ ಅರ್ಜಿಯನ್ನು ಸಲ್ಲಿಸಿದವರ ಸಂಖ್ಯೆ ಕೇವಲ ೪೦ ಲಕ್ಷ ಎಂದು ವರದಿ ತಿಳಿಸಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೋರಿ ಅರ್ಜಿ ಸಲ್ಲಿಸುವ ಬಿಪಿಎಲ್ ಕುಟುಂಬದವರೂ ಸಹ ಅರ್ಜಿಯೊಂದಿಗೆ ೧೦ ರೂ.ಗಳ ಪೋಸ್ಟಲ್ ಆರ್ಡರ್ ಹಾಗೂ ಬಿಪಿಎಲ್ ಕಾರ್ಡ್‌ನ ಪ್ರತಿ ಮತ್ತು ಚಾಲ್ತಿ ವರ್ಷದ ಆದಾಯ ಪ್ರಮಾಣಪತ್ರದ ಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಕಾಯ್ದೆ ಜಾರಿಯಾಗಿ ೮ ವರ್ಷಗಳೇ ಕಳೆದಿದ್ದರೂ, ಇನ್ನೂ ಕಾಯ್ದೆಯ ಬಗ್ಗೆ ಅಧಿಕಾರಿಗಳು, ಸಿಬ್ಬಂದಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಅಡ್ಡಿ-ಆತಂಕಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಿಂದ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲಾಗುತ್ತಿದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಮಲ್ಲೇಶಪ್ಪ ಮತ್ತು ಜಿ.ಜಿ. ಹೆಗಡೆ ಅವರು ಭಾಗವಹಿಸಿದ್ದರು. ಜಿ.ಪಂ. ಉಪಕಾರ್ಯದರ್ಶಿ ರವಿ ಬಸರಿಹಳ್ಳಿ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಲಾಯಖ್ ಅಲಿ ಮುಂತಾದವರು ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದರು.

0 comments:
Post a Comment