PLEASE LOGIN TO KANNADANET.COM FOR REGULAR NEWS-UPDATES

 ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರು ಪಿಹೆಚ್.ಡಿ, ಎನ್.ಇ.ಟಿ, ಎಸ್.ಎಲ್.ಇ.ಟಿ, ಎಂ.ಫಿಲ್ ಉತ್ತೀರ್ಣರಾದವರಿಗೆ ಅಹ್ತೆಯ ಆಧಾರದ ಮೇಲೆ ಪದವಿ ಕಾಲೇಜಿಗೆ ಬಡ್ತಿ ನೀಡಲು ಸರಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂಬ ಹೇಳಿಕೆಯ ಹಿನ್ನಲೆಯಲ್ಲಿ ಅತಿಥಿ ಉಪನ್ಯಾಸಕರ ಸಂಘವು ಅಸಮಾದಾನ ತೋರ್ಪಡಿಸುತ್ತಿರುವುದು ಸರಿಯಲ್ಲ ಎಂದು ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಅವರು ಪತ್ರಿಕೆ ಹೇಳಿಕೆ ನೀಡಿದ್ದಾರೆ.
ಇಂತಹ ಮುಂಬಡ್ತಿಗಳು ಪ್ರಾಥಮಿಕದಿಂದ ಪ್ರೌಢ, ಪ್ರೌಢ ದಿಂದ  ಪದವಿ ಪೂರ್ವ ಕಾಲೇಜುಗಳಿಗೆ ಈಗಾಗಲೇ ಅರ್ಹತೆಯ ಆಧಾರದ ಮೇಲೆ ನೀಡಲಾಗುತ್ತಿದೆ. ಅದರಂತೆ ಅನೇಕ ವರ್ಷಗಳಿಂದ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪಿಹೆಚ್.ಡಿ, ಎನ್.ಇ.ಟಿ, ಎಸ್.ಎಲ್.ಇ.ಟಿ, ಎಂ.ಫಿಲ್ ಉತ್ತೀರ್ಣರಾದವರಿಗೆ ಪದವಿ ಕಾಲೇಜುಗಳಿಗೆ ಪದೋನ್ನತಿ ನೀಡುವ ಬಗ್ಗೆ ನಡೆಯುತ್ತಿರುವ ಚಿಂತನೆಗಳು ಸರಿಯಾದ ಕ್ರಮವಾಗಿದೆ. ಅದನ್ನು ವಿರೋದಿಸುವುದರಲ್ಲಿ ಅರ್ಥವಿಲ್ಲ. ಹೀಗಾಗಲೇ ರಾಜ್ಯದ ಅಕ್ಕ ಪಕ್ಕದ ಆಂದ್ರಪ್ರದೇಶ, ತಮಿಳುನಾಡು ಮುಂತಾದ ರಾಜ್ಯಗಳಲ್ಲಿ ಇಂತಹ ಕಾನೂನುಗಳು ಜಾರಿಯಲ್ಲಿವೆ. ಅತಿಥಿ ಉಪನ್ಯಾಸಕರ ಬಗ್ಗೆ ನಮಗೆ ಗೌರವ ಇದೆ. ಅವರ ನೇಮಕಾತಿಗಾಗಿ ಹೋರಾಟ ಮಾಡಿದಲ್ಲಿ ಅದಕ್ಕೆ ನಮ್ಮ ಬೆಂಬಲವಿದೆ, ಇಂತಹ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸಂಘವು ಸಹ ಮುಂಬಡ್ತಿ ಹೋರಾಟಗಳಲ್ಲಿ ಪಾಲ್ಗೊಳ್ಳುವುದು ಅಗತ್ಯವಿದೆ ಎಂದು  ತಿಳಿಸಿದ್ದಾರೆ.

Advertisement

0 comments:

Post a Comment

 
Top