ಕೊಪ್ಪಳ. ಬರುವ ಜ. ೧೮ರಂದು ನಡೆಯಲಿರುವ ಇಲ್ಲಿನ ಗವಿಮಠದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸದ ಪೂರ್ವಭಾವಿ ಕೆಲಸಗಳು ನಗರಸಭೆಯಿಂದ ಆರಂಭವಾಗಿದ್ದು, ಮಂಗಳವಾರ ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸೊಂಡೂರ ಹಾಗೂ ಉಪಾಧ್ಯಕ್ಷ ಅಮ್ಜದ್ ಪಟೇಲ್ ಗವಿಮಠದ ಆವರಣದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.
ನಂತರ ಅವರು ಈಗಾಗಲೇ ಕೊಪ್ಪಳ ನಗರಸಭೆಯಿಂದ ಆರಂಭವಾಗಿರುವ ಯುಜಿಡಿ ಕಾಮಗಾರಿಗಳ ಸ್ಥಳಗಳಿಗೂ ತೆರಳಿ ಪರಿಶೀಲನೆ ನಡೆಸಿದರು. ಗವಿಮಠದಿಂದ ಗಡಿಯಾರಕಂಬದರೆಗೆಗಿನ, ಗವಿಮಠದಿಂದ ಬಸವೇಶ್ವರ ವೃತ್ತ ಹಾಗೂ ಕಾತರಕಿ ರಸ್ತೆ ಸೇರಿದಂತೆ ಯುಜಿಡಿ ಕಾಮಗಾರಿಯಿಂದ ಕಿತ್ತಿರುವ ರಸ್ತೆಗಳನ್ನು ದುರಸ್ತಿಗೊಳಿಸುವ ಕಾಮಗಾರಿಗಳನ್ನೂ ವೀಕ್ಷಿಸಿದರು.
ಜಾತ್ರೆಗೆ ಬರುವ ಭಕ್ತರ ಅನುಕೂಲಕ್ಕಾಗಿ ಕುಡಿವ ನೀರಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ನಗರಸಭೆಯಿಂದ ನಡೆದಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ನಗರಸಭೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ಜೊತೆ ಪ್ರಭಾರಿ ಪೌರಾಯುಕ್ತರಾದ ಮಂಜುನಾಥ, ಯುಜಿಡಿ ಪಿಎಂ ಶ್ರೀನಿವಾಸ ನೇತೃತದಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಜಾತ್ರಾ ಅಂಗವಾಗಿ ಕಾಮಗಾರಿಗಳನ್ನು ತುರ್ತಾಗಿ ಕೈಗೊಂಡು ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರು ಸೂಚಿಸಿದರು.
0 comments:
Post a Comment