PLEASE LOGIN TO KANNADANET.COM FOR REGULAR NEWS-UPDATES

  ವಾರ್ತಾ ಇಲಾಖೆಯು ೨೦೧೩-೧೪ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಆಸಕ್ತ ಪರಿಶಿಷ್ಟ ಜಾತಿಯ ೪೦ ಸಂಖ್ಯೆಯ ನಿರುದ್ಯೋಗಿ ಪದವೀಧರ ಯುವಕ-ಯುವತಿಯರಿಗೆ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅಂದರೆ ಛಾಯಾಗ್ರಹಣ, ಸಂಕಲನ, ಮಲ್ಟಿ ಮೀಡಿಯಾದಲ್ಲಿ ಒಂದು ತಿಂಗಳ ಸರ್ಟಿಫಿಕೇಟ ಕೋರ್ಸ್‌ನ ರೀತಿಯಲ್ಲಿ ತಾಂತ್ರಿಕ ವೃತ್ತಿ ತರಬೇತಿಯನ್ನು ನೀಡಲು ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಕೇಂದ್ರ ಇಲ್ಲಿ ಜನವರಿ/ಫೆಬ್ರುವರಿ-೨೦೧೪ನೇ ತಿಂಗಳಿನಲ್ಲಿ ನಡೆಸಲು ಇಲಾಖೆಯು ಉದ್ದೇಶಿಸಿದ್ದು, ಈ ಸಂಬಂಧ ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ತರಬೇತಿ ಅವಧಿ ೩೦ ದಿನಗಳಿಗಿದ್ದು, ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸೌಕರ್ಯವನ್ನು ಇಲಾಖೆಯಿಂದ ಒದಗಿಸಲಾಗುತ್ತದೆ. ಅಭ್ಯರ್ಥಿಗಳು ಯಾವುದೇ ಪದವೀಧರರಾಗಿದ್ದು, ಕಂಪ್ಯೂಟರ್ ಜ್ಞಾನವುಳ್ಳವರಿಗೆ ಆದ್ಯತೆ ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು, ವಯಸ್ಸು, ವಿಳಾಸ, ವಿದ್ಯಾರ್ಹತೆ, ಜಾತಿ ಇತ್ಯಾದಿ ಸ್ವ-ವಿವರವುಳ್ಳ ಮಾಹಿತಿಯನ್ನು ಬಿಳಿ ಹಾಳೆಯ ಮೇಲೆ ಬೆರಳಚ್ಚು ಮಾಡಿಸಿ ಅಥವಾ ಕೈಯಿಂದ ಸ್ಪಷ್ಟವಾಗಿ ಭರ್ತಿ ಮಾಡಿದ ಅರ್ಜಿಯನ್ನು ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ನಿರ್ದೇಶಕರು, ವಾರ್ತಾ ಇಲಾಖೆ, ವಾರ್ತಾ ಸೌಧ, ನಂ. ೧೭, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು-೫೬೦೦೦೧ ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ತಾಂತ್ರಿಕ ವೃತ್ತಿ ತರಬೇತಿಗಾಗಿ ಅರ್ಜಿ ಎಂದು ಲಕೋಟೆ ಮೇಲೆ ನಮೂದಿಸಿ ಡಿ. ೩೧ ರ ಒಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ : ೦೮೦-೨೨೦೨೮೦೫೨/೫೬ ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ವಾರ್ತಾ ಇಲಾಖೆಯ ಕೇಂದ್ರ ಕಚೇ  ತಿಳಿಸಿದೆ.


Advertisement

0 comments:

Post a Comment

 
Top