ವಾರ್ತಾ ಇಲಾಖೆಯು ತಾಲೂಕಿನ ಅಳವಂಡಿಯ ಶ್ರೀ ಸಿದ್ದೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜು ಇವರ ಸಹಯೋಗದೊಂದಿಗೆ ಮದ್ಯಪಾನದ ದುಷ್ಪರಿಣಾಮಗಳ ಕುರಿತಂತೆ ’ಮಾದಕ-ಮನುಕುಲಕೆ ಮಾರಕ’ ಕುರಿತ ವಿಚಾರಸಂಕಿರಣವನ್ನು ಜ. ೨೭ ರಂದು ಬೆಳಿಗ್ಗೆ ೧೦ ಗಂಟೆಗೆ ಅಳವಂಡಿಯ ಸಿದ್ದೇಶ್ವರ ಸಂ.ಪ.ಪೂ. ಕಾಲೇಜಿನಲ್ಲಿ ಏರ್ಪಡಿಸಿದೆ.
ಕರ್ನಾಟಕ ವಿದ್ಯಾವರ್ಧಕ ಸಮಿತಿ, ಅಳವಂಡಿಯ ಶ್ರೀ ರೇವಣಸಿದ್ದೇಶ್ವರ ಸ್ವಾಮಿಗಳು ಕಟ್ಟಿಮನಿ ಹಿರೇಮಠ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ವಿದ್ಯಾವರ್ಧಕ ಸಮಿತಿಯ ಅಧ್ಯಕ್ಷರಾದ ಭುಜಂಗಸ್ವಾಮಿಗಳು ಇನಾಮದಾರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ ಬಾಸೂರ, ಸಿದ್ದೇಶ್ವರ ಸಂಯುಕ್ತ ಪ.ಪೂ. ಕಾಲೇಜಿನ ಪ್ರಾಚಾರ್ಯ ವಿ.ಸಿ. ಬೆನ್ನಳ್ಳಿ, ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿ ಎಂ.ಎಸ್. ಹೊಟ್ಟಿನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಮದ್ಯಪಾನದ ದುಷ್ಪರಿಣಾಮಗಳ ಕುರಿತಂತೆ ಹಿರೇಸಿಂದೋಗಿಯ ಸರ್ಕಾರಿ ಪ.ಪೂ. ಕಾಲೇಜು ಉಪನ್ಯಾಸಕ ಶಂಕ್ರಯ್ಯ ಅಬ್ಬಿಗೇರಿ ಮಠ ಅವರು ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡುವರು ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ತಿಳಿಸಿದ್ದಾರೆ.
0 comments:
Post a Comment