ಸರ್ಕಾರಿ ಸೇವೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ರಾಜ್ಯ ಸರ್ಕಾರಿ ಅಧಿಕಾರಿ, ನೌಕರರಿಗೆ ಸರ್ಕಾರದ ವತಿಯಿಂದ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದ ಕೊಪ್ಪಳ ಜಿಲ್ಲೆಯ ಐವರು ಅಧಿಕಾರಿ, ಸಿಬ್ಬಂದಿಗಳಿಗೆ ರಾಜ್ಯ ಸಣ್ಣ ಕೈಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಪ್ರದಾನ ಮಾಡಿದರು.
ಸರ್ಕಾರಿ ಸೇವೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ರಾ
ಜ್ಯ ಸರ್ಕಾರ ಜಿಲ್ಲಾ ಮಟ್ಟದಲ್ಲಿಯೂ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ಕೊಪ್ಪಳ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಟಿ. ಕೃಷ್ಣಮೂರ್ತಿ, ಕುಷ್ಟಗಿ ತಾಲೂಕು ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಶಕುಂತಲಾ ಪಾಟೀಲ್, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಜಿಲ್ಲಾ ಉದ್ಯೋಗಾಧಿಕಾರಿ ಬಿ.ಎಫ್. ಬೀರನಾಯ್ಕರ್, ನೀರಾವರಿ ಇಲಾಖೆಯ ಅಧೀಕ್ಷಕ ಎನ್.ಎಮ್. ಸವದತ್ತಿ ಅವರು ಈ ವರ್ಷದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ೬೫ನೇ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದರು. ಸರ್ಕಾರಿ ಸೇವೆ ಹಾಗೂ ಸಂಗೀತ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಎಸ್.ಎಮ್. ಜೋಶಿ ಅವರಿಗೆ ವಿಶೇಷ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿ.ಪಂ. ಅಧ್ಯಕ್ಷ ಟಿ. ಜನಾರ್ಧನ ಹುಲಿಗಿ, ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ನಾಗರಾಜ್ ಜುಮ್ಮನ್ನವರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ತಾ.ಪಂ. ಅಧ್ಯಕ್ಷ ಮುದೇಗೌಡ ಪಾಟೀಲ್, ನಗರಸಭೆ ಉಪಾಧ್ಯಕ್ಷ ಅಮ್ಜದ್ ಪಟೇಲ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
0 comments:
Post a Comment