PLEASE LOGIN TO KANNADANET.COM FOR REGULAR NEWS-UPDATES

 ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ||ಡಿ.ವೀರೇಂದ್ರ ಹೆಗ್ಗಡೆಯವರ ನಾಗರಿಕ ಪ್ರಜ್ಞಾ ಕಾರ್ಯಕ್ರಮದಡಿ ಜನವರಿ ೨೬ರಂದು ಗಣರಾಜ್ಯೋತ್ಸವದ ನಿಮಿತ್ಯ ನಿರ್ಮಿತ ಕೇಂದ್ರ ಕೊಪ್ಪಳದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾದೇಶಿಕ ಕಛೇರಿಯ ಯೋಜನಾಧಿಕಾರಿಗಳಾದ ಸೋಮಪ್ಪ ಪೂಜಾರವರು ಉದ್ಘಾಟಿಸಿ ಸ್ವ-ಸಹಾಯ ಸಂಘದ ಮಹಿಳೆಯರಿಗೆ ನಗರದ ಸ್ವಚ್ಛತೆಯ ಬಗ್ಗೆ ಹಾಗೂ ಶೌಚಾಲಯ ನಿರ್ಮಾಣ ಮಾಡಿಕೊಳ್ಳುವ ಬಗ್ಗೆ ತಿಳುವಳಿಕೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆಯ ಉಪಾದ್ಯಕ್ಷರಾದ ಅಮ್ಜದ್ ಪಟೇಲ್ ರವರು ಮಾತಾನಾಡಿ ಸರ್ಕಾರದಿಂದ ಬರುವ ಅನುದಾನವನ್ನು ಸಂಪೂರ್ಣವಾಗಿ ನಗರದ ಸ್ವಚ್ಚತೆಗಾಗಿ ವಿನಿಯೋಗಿಸುವುದಾಗಿ ತಿಳಿಸಿದರು ಮತ್ತು ಪೂಜ್ಯರ ಈ ನಾಗರಿಕ ಪ್ರಜ್ಞಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅವರ ಆಸೆಯಂತೆ ನಾವೆಲ್ಲರೂ ಒಂದಾಗಿ ಈ ಪ್ರದೇಶವನ್ನು ಮಾಲಿನ್ಯರಹಿತವನ್ನಾಗಿಸೋಣ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಸಂಸ್ಥೆಯ ಆಂತರಿಕ ಲೆಕ್ಕೆ ಪರಿಶೋಧಕರಾದ ಚಂದ್ರಶೇಖರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಮತ್ತು ವಲಯದ ಮೇಲ್ವಿಚಾರಕರಾದ ಶಿಲ್ಪ ತುಳಸಿಮನಿ ನಿರೂಪಣೆ ಮಾಡಿದರು. ಹಾಗೆಯೇ ಸ್ಥಳೀಯ ಪ್ರತಿನಿಧಿಗಳು ಮತ್ತು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು. 

Advertisement

0 comments:

Post a Comment

 
Top