
ಗುರುವಾರ ಮಲ್ಲೇಶ್ವರಂನಲ್ಲಿರುವ
ಕಾಡುಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬಿ.ಎಸ್.ಯಡಿಯೂರಪ್ಪ ಕಾಲ್ನೆಡಿಗೆ ಮೂಲಕ ಬಿಜೆಪಿ ಕಚೇರಿಗೆ ಆಗಮಿಸಿದರು. ನಾಲ್ವರು ಶಾಸಕರು, ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಸಿಎಂ ಉದಾಸಿ ಮುಂತಾದವರು ಯಡಿಯೂರಪ್ಪರ ಜೊತೆಗಿದ್ದರು. ಬಿಜೆಪಿಗೆ ಮರಳಿದ ಬಿ.ಎಸ್.ಯಡಿಯೂರಪ್ಪರಿಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಭವ್ಯ ಸ್ವಾಗತ ದೊರೆಯಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಯಡಿಯೂರಪ್ಪರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವ ನೀಡುವ ಮೂಲಕ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಅನಂತ್ ಕುಮಾರ್, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಿಜೆಪಿಯ ಹಲವು ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ವೇಳೆ ಉಪಸ್ಥಿತರಿದ್ದರು. ಕೆಜೆಪಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ವಿ.ಧನಂಜಯ್ ಕುಮಾರ್ ಹೊರತು ಪಡಿಸಿ ಉಳಿದ ನಾಯಕರು ಯಡಿಯೂರಪ್ಪ ಜೊತೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
0 comments:
Post a Comment