ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜ ಭಾಗ್ಯನಗರ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ಜ.೧೦ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಪದವಿ ಕಾಲೇಜ ಮೈದಾನದಲ್ಲಿ ಜರುಗಲಿದೆ. ಜ.೧೦ ರಂದು ಪ್ರಾಥಮಿಕ ಶಾಲಾ ವಿಭಾಗ ಹಾಗೂ ಜ.೧೧ ರಂದು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ ಜರುಗಲಿದೆ.
ಸಣ್ಣ ನೀರಾವರಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಟಿ.ಜನಾರ್ಧನ ಹುಲಿಗಿ, ಸಂಸದ ಶಿವರಾಮಗೌಡ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶ ಕಂತೆಪ್ಪ ಕುಳಗಿ, ಜಿ.ಪಂ.ಸದಸ್ಯೆ ವನಿತಾ ವೀರಣ್ಣ ಗಡಾದ, ತಾ.ಪಂ.ಅಧ್ಯಕ್ಷ ಮುದೇಗೌಡ ನಿಂಗನಗೌಡ ಮಾಲಿಪಾಟೀಲ್, ತಾ.ಪಂ.ಸದಸ್ಯರಾದ ದಾನಪ್ಪ ಜಿ.ಕವಲೂರು, ಶ್ರೀನಿವಾಸ ಹ್ಯಾಟಿ, ಗ್ರಾ.ಪಂ.ಅಧ್ಯಕ್ಷ ಹೊನ್ನೂರಸಾಬ್ ಮಹ್ಮದಸಾಬ್, ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ, ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣನವರ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎಸ್.ಶಿವರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭು ಕಿಡದಾಳ ಸೇರಿದಂತೆ ಜಿ.ಪಂ.ಸದಸ್ಯರು ಭಾಗವಹಿಸುವರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಹೆಚ್.ವೀರಣ್ಣ ಅವರು ತಿಳಿಸಿದ್ದಾರೆ.
0 comments:
Post a Comment