PLEASE LOGIN TO KANNADANET.COM FOR REGULAR NEWS-UPDATES

 ಕೊಪ್ಪಳ ನಗರದಲ್ಲಿ ಭಾರತ್ ಗ್ಯಾಸ್ ಅಡುಗೆ ಅನಿಲ ಸಿಲಿಂಡರ್ ವಿತರಣೆಯ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಓರ್ವ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಹಾಗೂ ಏಜೆನ್ಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಕಿರಿಯ ಸಹಾಯಕರು ಹಾಗೂ ಓರ್ವ ಡಿ-ಗ್ರೂಪ್ ನೌಕರರನ್ನು ಇಲಾಖೆಯ ಕರ್ತವ್ಯಕ್ಕೆ ಮರಳುವಂತೆ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಆದೇಶ ಹೊರಡಿಸಿದ್ದಾರೆ.
  ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಭಾರತ್ ಗ್ಯಾಸ್ ಏಜೆನ್ಸಿಯಿಂದ ಗ್ರಾಹಕರಿಗೆ ಸಮರ್ಪಕವಾಗಿ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆ ಆಗುತ್ತಿಲ್ಲವೆಂಬುದಾಗಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಇದಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಭಾರತ್ ಗ್ಯಾಸ್ ಕಂಪನಿಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿಸ್ತೃತವಾಗಿ ಚರ್ಚೆ ನಡೆಸಲಾಗಿದೆ. ಕೊಪ್ಪಳ ನಗರ ಮತ್ತು ಗ್ರಾಮಾಂತರದಲ್ಲಿ ಸಾರ್ವಜನಿಕರಿಗೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಗ್ರಾಹಕರಿಗೆ ಯಾವುದೇ ತೊಂದರೆಯಿಲ್ಲದೆ ಸಮರ್ಪಕವಾಗಿ ಪೂರೈಕೆಯಾಗುವಂತೆ ಮಾಡಲು ಜಿಲ್ಲಾಡಳಿತ ಮಧ್ಯ ಪ್ರವೇಶಿಸುವುದು ಅನಿವಾರ್ಯವಾಗಿದೆ.  ಈ ನಿಟ್ಟಿನಲ್ಲಿ ಗ್ರಾಹಕರಿಗೆ ಯಾವುದೇ ತೊಂದರೆ ಇಲ್ಲದಂತೆ ಸಮರ್ಪಕ ಅಡುಗೆ ಅನಿಲ ಸರಬರಾಜು ವ್ಯವಸ್ಥೆ ಸುಧಾರಣೆಯಾಗುವವರೆಗೆ, ಏಜೆನ್ಸಿಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲು ನಿರ್ಧರಿಸಲಾಗಿದ್ದು, ಕೊಪ್ಪಳದ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ಇಲಾಖೆಯ ಸಹಾಯಕ ನಿರ್ದೇಶಕ ಎಂ. ಸಿದ್ದಲಿಂಗಸ್ವಾಮಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.  ಇವರು ತಮ್ಮ ಇಲಾಖೆಯ ಕೆಲಸದೊಂದಿಗೆ ಎಲ್‌ಪಿಜಿ ಘಟಕದ ನೋಡಲ್ ಅಧಿಕಾರಿಯ ಕಾರ್ಯ ನಿರ್ವಹಿಸಲು ಸೂಚಿಸಲಾಗಿದೆ.  
  ಅದೇ ರೀತಿ ನಿಗಮದ ಎಲ್.ಪಿ.ಜಿ. ಗ್ಯಾಸ್ ಏಜೆನ್ಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಇಬ್ಬರು ಕಿರಿಯ ಸಹಾಯಕರನ್ನು ಹಾಗು ಓರ್ವ ಡಿ-ಗ್ರೂಪ್ ನೌಕ
ರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದ್ದು, ಇವರನ್ನು ಕೊಪ್ಪಳದಲ್ಲಿನ ಆಹಾರ ಇಲಾಖೆ ವಿಭಾಗದ ಅನಭಾಗ್ಯ ಯೋಜನೆಯ ಕಾರ್ಯಕ್ಕೆ ನಿಯೋಜಿಸಿ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಆದೇಶ ಹೊರಡಿಸಿದ್ದಾರೆ.

Advertisement

0 comments:

Post a Comment

 
Top