PLEASE LOGIN TO KANNADANET.COM FOR REGULAR NEWS-UPDATES



ಕೊಪ್ಪಳ,ಫೆ.೦೭: ಮುಂದಿನ ಪ್ರಧಾನಿ ಎಂದೇ ಬಿಂಬಿತವಾಗಿರುವ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯವರು ತಮ್ಮ ರಾಜ್ಯದಲ್ಲಿ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಇಡೀ ದೇಶಕ್ಕೆ ಮಾದರಿಯಾಗಿ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕುರಿತು ಮನೆಮನೆಗೆ ಮುಟ್ಟಿಸುವ ಸದುದ್ದೇಶದಿಂದ ಪ್ರಾರಂಭವಾಗಿರುವ ನಮೋ ಬ್ರಿಗ್ರೇಡ್ ರಥವು ಇಂದು ಕೊಪ್ಪಳ ನಗರಕ್ಕೆ ಆಗಮಿಸಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. 
ಮೋದಿಯ ಅಭಿಮಾನಿಗಳು ಕಾರ್ಯಕರ್ತರು ರಥವನ್ನು ಸ್ವಾಗತಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. 
ಮೆರವಣಿಗೆಯಲ್ಲಿ ತೋಟಪ್ಪ ಕಾಮನೂರ, ಅಮೀತ ಕಂಪ್ಲಿಕರ, ಬಸವರಾಜ ಭೋವಿ, ಪ್ರಾಣೇಶ ಮಾದನೂರ, ಜ್ಞಾನಸುಂದರ ಮತ್ತಿತರರು ಪಾಲ್ಗೊಂಡಿದ್ದರು. 

Advertisement

0 comments:

Post a Comment

 
Top