ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ, ಇದೇ ದಿ.೧೩ ರಂದು ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಸಮಿತಿ ಅಧ್ಯಕ್ಷೆ ಲಕ್ಷ್ಮೀ ಸೋನಾರ, ಆದಪ್ಪ ಕುಡಗುಂಟಿ ಹಾಗೂ ಕಾರ್ಯದರ್ಶಿ ಶಿವನಗೌಡ ಪಾಟೀಲ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ, ಖಾಸಗೀಕರಣದ ವಿರುದ್ಧ ಹಾಗೂ ವೇತನ ಹೆಚ್ಚಿಸುವುದು ಮತ್ತು ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿ ಪಾರ್ಲಿಮೆಂಟ್ ಚಲೋ ಹಮ್ಮಿಕೊಳ್ಳಲಾಗಿದೆ. ಈ ಹೋರಾಟಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ೪ ತಾಲೂಕಿನ ಅಕ್ಷರ ದಾಸೋಹ ನೌಕರರು ಇದೇ ದಿ.೯ ರಂದು ರವಿವಾರ ಮಧ್ಯಾಹ್ನ ೧ ಗಂಟೆಯೊಳಗೆ ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ಪ್ಲಾಟ್ ಫಾರಂನಲ್ಲಿ ಹಾಜರಾಗುವಂತೆ ಜಿಲ್ಲಾ ಅಕ್ಷರ ದಾಸೋಹ ನೌಕರರ ಸಂಘಟನೆ ಸಮಿತಿ ಮನವಿ ಮಾಡಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷೆ ಲಕ್ಷ್ಮೀ ಸೋನಾರ ಮೊ. ನಂ.೯೯೪೫೪೪೩೭೬೬, ಆದಪ್ಪ ಕುಡಗುಂಟಿ ಮೊ. ನಂ. ೯೫೩೫೯೫೨೬೦೮ ಹಾಗೂ ಕಾರ್ಯದರ್ಶಿ ಶಿವನಗೌಡ ಪಾಟೀಲ್ ಮೊ.ನಂ. ೮೮೬೧೯೧೫೫೭೦ ಇವರನ್ನು ಸಂಪರ್ಕಿಸಲು ಕೋರಿದ್ದಾರೆ.
0 comments:
Post a Comment