ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಗೊಂಡಿದ್ದು, ನಾಮಪತ್ರ ಸಲ್ಲಿಕೆ ಮಾ. ೧೯ ರಿಂದ ಪ್ರಾರಂಭಗೊಂಡಿದೆ. ಮಾ. ೨೬ ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.
ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಅಪರ ಜಿಲ್ಲಾಧಿಕಾರಿಗಳು, ಕೊಪ್ಪಳ ಇವರಿಗೆ ಮಾ. ೨೬ ರವರೆಗೆ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ, ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೩ ಗಂಟೆಯವರೆಗೆ ಸಲ್ಲಿಸಬಹುದಾಗಿದೆ. ನಾಮಪತ್ರದ ನಮೂನೆಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆಯಬಹುದಾಗಿದೆ. ನಾಮಪತ್ರಗಳನ್ನು ಮಾ. ೨೭ ರಂದು ಬೆಳಿಗ್ಗೆ ೧೧ ಗಂಟೆಗೆ ಪರಿಶೀಲನೆ ನಡೆಸಲಾಗುವುದು. ಉಮೇದುವಾರಿಕೆ ಹಿಂತೆಗೆದುಕೊಳ್ಳುವ ತಿಳುವಳಿಕೆ ಪತ್ರವನ್ನು ಉಮೇದುವಾರರು ಅಥವಾ ಅವರ ಸೂಚಕರು ಅಥವಾ ಅದನ್ನು ಸಲ್ಲಿಸಲು ಉಮೇದುವಾರರಿಂದ ಲಿಖಿತದಲ್ಲಿ ಅಧಿಕೃತನಾದ ಅವರ ಚುನಾವಣಾ ಏಜೆಂಟ್, ಜಿಲ್ಲಾ ಚುನಾವಣಾಧಿಕಾರಿಗಳು ಅಥವಾ ಸಹಾಯಕ ಚುನಾವಣಾಧಿಕಾರಿಗಳಿಗೆ ಮಾ. ೨೯ ರಂದು ಮಧ್ಯಾಹ್ನ ೩ ಗಂಟೆಯ ಒಳಗಾಗಿ ಸಲ್ಲಿಸಬಹುದು. ಮತದಾನ ಏ. ೧೭ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಪಿ. ಮೋಹನ್‌ರಾಜ್ ತಿಳಿಸಿದ್ದಾರೆ.
ಮತದಾರರ ಜಾಗೃತಿಗೆ ಮಾ. ೨೧ ರಂದು ಕೊಪ್ಪಳದಲ್ಲಿ ಕ್ಯಾಂಡಲ್ ಲೈಟಿಂಗ್
ಕಡ್ಡಾಯ ಮತದಾನವನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಯೋಜನೆಡಿ ವಿದ್ಯಾರ್ಥಿಗಳಿಂದ ಕ್ಯಾಂಡಲ್ ಲೈಟಿಂಗ್ ಕಾರ್ಯಕ್ರಮ ಮಾ. ೨೧ ರಂದು ಸಂಜೆ ೭ ಗಂಟೆಗೆ ಕೊಪ್ಪಳದ ಸಾಹಿತ್ಯ ಭವನದ ಬಳಿ ಆಯೋಜಿಸಲಾಗಿದೆ.
ಮತದಾರರಿಗೆ ವ್ಯವಸ್ಥಿತ ಶಿಕ್ಷಣ, ಸಹಭಾಗಿತ್ಯ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ ಕಾರ್ಯಕ್ರಮದಡಿ ಮತದಾರರನ್ನು ಮತದಾನಕ್ಕೆ ಉತ್ತೇಜನಗೊಳಿಸುವುದು, ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಕ್ಯಾಂಡಲ್ ಲೈಟಿಂಗ್ ಕಾರ್ಯಕ್ರಮ ಮಾ. ೨೧ ರಂದು ಸಂಜೆ ೭ ಗಂಟೆಗೆ ನಗರದ ಸಾಹಿತ್ಯ ಭವನದ ಬಳಿ ಆಯೋಜಿಸಲಾಗಿದೆ. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯ ವಿದ್ಯಾರ್ಥಿಗಳು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಹಾಗೂ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನರಾವ್ ಮನವಿ ಮಾಡಿಕೊಂಡಿದ್ದಾರೆ.
0 comments:
Post a Comment