PLEASE LOGIN TO KANNADANET.COM FOR REGULAR NEWS-UPDATES

  ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಮತದಾರರ ಜಾಗೃತಿಗಾಗಿ ಹಲವು ಕಾರ್ಯಕ್ರಮಗಳನ್ನು ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಅನುಷ್ಠಾನಗೊಳಿಸಲು ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸ್ವೀಪ್ ಸಮಿತಿಯನ್ನು ರಚಿಸಿ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೃಷ್ಣ ಡಿ ಉದಪುಡಿ ಅವರು ಆದೇಶ ಹೊರಡಿಸಿದ್ದಾರೆ.
  ಮತದಾರರಲ್ಲಿ ಮತದಾನ ಮಹತ್ವದ ಕುರಿತು ಅರಿವು ಮೂಡಿಸಿ, ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಪ್ರೇರೇಪಿಸಲು ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಚುನಾವಣಾ ಆಯೋಗವು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸ್ವೀಪ್ ಸಮಿತಿಗಳನ್ನು ರಚಿಸಿದೆ.  ಇದೀಗ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ತಾಲೂಕು ಮತ್ತು ಗ್ರಾಮ ಮಟ್ಟದಲ್ಲೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ.  ತಾಲೂಕು ಮಟ್ಟದ ಸ್ವೀಪ್ ಸಮಿತಿಗೆ ಆಯಾ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಅಧ್ಯಕ್ಷರಾಗಿದ್ದು, ತಾ.ಪಂ. ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ಸಿಡಿಪಿಓ, ಸಹಾಯಕ ಕೃಷಿ ನಿರ್ದೇಶಕರು, ಆಯಾ ಪುರಸಭೆ/ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು, ತೋಟಗಾರಿಕೆ ಸಹಾಯಕ ನಿರ್ದೇಶಕರು, ಪಂಚಾಯತಿ ರಾಜ್ ಇಂಜಿನಿಯರಿಂಗ್ ವಿಭಾಗದ ಎಇಇ ಗಳು ಸಮಿತಿಯ ಸದಸ್ಯರುಗಳಾಗಿದ್ದಾರೆ.
  ಗ್ರಾಮ ಪಂಚಾಯತಿ ಮಟ್ಟದ ಸಮಿತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಮಿತಿಯ ಅಧ್ಯಕ್ಷರಾಗಿದ್ದು, ಪಂಚಾಯತಿ ಕೇಂದ್ರ ಸ್ಥಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು, ಗ್ರಾಮ ಲೆಕ್ಕಿಗರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ. ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್‌ಗಳು, ಬೂತ್ ಮಟ್ಟದ ಅಧಿಕಾರಿಗಳು ಸಮಿತಿಯ ಸದಸ್ಯರುಗಳಾಗಿದ್ದಾರೆ.
  ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದ ಸ್ವೀಪ್ ಸಮಿತಿಯವರು ಮತದಾರರಲ್ಲಿ ಜಾಗೃತಿ ಮೂಡಿಸಲು ಅವಶ್ಯಕತೆಗೆ ತಕ್ಕಂತೆ ಚುನಾವಣಾ ಆಯೋಗದ ಸೂಚನೆಗೆ ಅನುಗುಣವಾಗಿ ಹಾಗೂ ಜಿಲ್ಲಾ ಮಟ್ಟದ ಸಮಿತಿಯಿಂದ ನೀಡಲಾಗುವ ಸೂಚನೆ, ಮಾರ್ಗದರ್ಶನಗಳಂತೆ ಸಮಿತಿ ಸಭೆ ಜರುಗಿಸಿ, ಸಭೆಯ ನಡವಳಿಗಳನ್ನು ಸಲ್ಲಿಸಬೇಕು.  ಅಲ್ಲದೆ ಮತದಾರರ ಜಾಗೃತಿಗೆ ಕೂಡಲೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.  ತಾಲೂಕು ಅಥವಾ ಗ್ರಾಮ ಮಟ್ಟದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಫೋಟೋ ಸಹಿತ ವರದಿಯನ್ನು ವಾರ್ತಾ ಇಲಾಖೆಯ ಇ-ಮೇಲ್ ವಿಳಾಸ varthabhavankoppal@gmail.com  CxÀªÁ infokoppal@gmail.com ವಿಳಾಸಕ್ಕೆ ಆಯಾ ದಿನದಂದೇ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೃಷ್ಣ ಡಿ ಉದಪುಡಿ ಅವರು ಸೂಚನೆ ನೀಡಿದ್ದಾರೆ.

Advertisement

0 comments:

Post a Comment

 
Top