PLEASE LOGIN TO KANNADANET.COM FOR REGULAR NEWS-UPDATES

 ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಮತದಾರರು ತಪ್ಪದೆ ಮತ ಚಲಾಯಿಸಿ, ಮತದಾನ ಪ್ರಮಾಣ ಹೆಚ್ಚಾಗುವಂತೆ ಮಾಡಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಜಾಗೃತಿಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ ಅವರು ತಿಳಿಸಿದ್ದಾರೆ.
  ಮತದಾರರನ್ನು ಕಡ್ಡಾಯ ಮತದಾನಕ್ಕೆ ಪ್ರೇರೇಪಿಸುವ ನಿಟ್ಟಿನಲ್ಲಿ ಮಾ. ೨೧ ರಂದು ನಗರದ ಸಾಹಿತ್ಯ ಭವನದ ಬಳಿ ವಿದ್ಯಾರ್ಥಿಗಳಿಂದ ಕ್ಯಾಂಡಲ್ ಲೈಟ್ ಮೆರವಣಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ.  ಕಡ್ಡಾಯ ಮತದಾನಕ್ಕೆ ಉತ್ತೇಜನ ನೀಡಲು, ಜಿಲ್ಲೆಯ ಎಲ್ಲ ಪದವಿ ಕಾಲೇಜು, ಪಾಲಿಟೆಕ್ನಿಕ್, ಬಿಇಡಿ, ಡಿಇಡಿ ಕಾಲೇಜು ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮ ಅಲ್ಲದೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.  ಕಾಲೇಜುಗಳಲ್ಲಿ ಮತದಾನದ ಮಹತ್ವ ಕುರಿತಂತೆ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ವಿದ್ಯಾರ್ಥಿನಿಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗುವುದು.  
  ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿ ಮ್ಯಾರಥಾನ್ ಓಟ ಸ್ಪರ್ಧೆ ಆಯೋಜನೆ, ವಿಜೇತರಿಗೆ ಬಹುಮಾನ ವಿತರಣೆ ಮತ್ತು ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸುವುದು.  ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವ-ಸಹಾಯ ಗುಂಪುಗಳು, ಸ್ತ್ರೀಶಕ್ತಿ ಗುಂಪುಗಳ ಸದಸ್ಯರುಗಳಿಂದ ಕರಪತ್ರಗಳ ಮೂಲಕ ಮನೆ ಮನೆಗೆ ಭೇಟಿ. ಕಡ್ಡಾಯ ಮತದಾನಕ್ಕೆ ಪ್ರೇರೇಪಿಸುವುದು.  ಪ್ರತಿಜ್ಞಾ ವಿಧಿ ಸ್ವೀಕಾರಕ್ಕೆ ಸಹಿ ಸಂಗ್ರಹ.  ಇದಕ್ಕಾಗಿ ಇವರೆಲ್ಲರಿಗೂ ಆಯಾ ತಾಲೂಕು ಕೇಂದ್ರದಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳುವುದು.  ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಓ)  ವೋಟರ್ ಸ್ಲಿಪ್‌ಗಳನ್ನು ಮತದಾರರ ಮನೆ ಬಾಗಿಲಿಗೆ ತಲುಪಿಸುವ ಸಂದರ್ಭದಲ್ಲಿ ಕಡ್ಡಾಯ ಮತದಾನದ ಜಾಗೃತಿ ಮೂಡಿಸಲು ತರಬೇತಿ ನೀಡುವುದು. ಹಾಗೂ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಸ್ವೀಕಾರದ ಕರಪತ್ರಗಳನ್ನು ಮತದಾರರ ಕುಟುಂಬಗಳಿಗೆ ನೀಡಿ, ಸಹಿ ಸಂಗ್ರಹಿಸುವಂತಹ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
  ಜಿಲ್ಲೆಯಲ್ಲಿನ ಎಲ್ಲ ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವುದು, ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧನೆ.  ಸರ್ಕಾರಿ ನೌಕರರ ಸಂಘದ ಸಹಕಾರದೊಂದಿಗೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವುದು.  ಜಿಲ್ಲೆಯ ಕಾಲೇಜುಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಮತದಾನದ ಮಹತ್ವ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳುವುದು.  ಗ್ರಾಮೀಣ ಪ್ರದೇಶಗಳಲ್ಲಿ ಕಡ್ಡಾಯ ಮತದಾನದ ಜಾಗೃತಿಗಾಗಿ ನಿಯಮಿತವಾಗಿ ಡಂಗುರ ಸಾರಿಸುವುದು.  ನಗರ- ಸ್ಥಳೀಯ ಸಂಸ್ಥೆಗಳ ಕಸ ವಿಲೇವಾರಿ ವಾಹನಗಳ ಮೂಲಕ ಮತದಾರರ ಜಾಗೃತಿ ಗೀತೆಗಳ ಪ್ರಸಾರ ಮಾಡುವುದು.  ಸರ್ಕಾರಿ ಬಸ್ ನಿಲ್ದಾಣಗಳಲ್ಲಿರುವ ಧ್ವನಿವರ್ಧಕ ವ್ಯವಸ್ಥೆಗಳಲ್ಲಿ ಮತದಾರರ ಜಾಗೃತಿ ಸಂದೇಶಗಳನ್ನು ಬಿತ್ತರಿಸುವುದು.  ಅಂಚೆ ಇಲಾಖೆಯ ನೆರವಿನೊಂದಿಗೆ ಎಲ್ಲ ಲಕೋಟೆಗಳಿಗೆ ಮತದಾರರ ಜಾಗೃತಿ ಸಂದೇಶವುಳ್ಳ ಸೀಲ್ ಹಾಕಿಸುವುದು.  ಆಕಾಶವಾಣಿ ಕೇಂದ್ರದ ಸಹಯೋಗದೊಂದಿಗೆ ಫೋನ್-ಇನ್ ಕಾರ್ಯಕ್ರಮಗಳ ಮೂಲಕ ಕಡ್ಡಾಯ ಮತದಾನಕ್ಕೆ ಮತದಾರರಲ್ಲಿ ಜಾಗೃತಿ ಮೂಡಿಸುವುದು.  ಕೇಬಲ್ ನೆಟ್‌ವರ್ಕ್‌ಗಳಲ್ಲಿ ಕಡ್ಡಾಯ ಮತದಾನದ ಬಗೆಗಿನ ವಿಡಿಯೋ ಸಂದೇಶಗಳ ನಿಯಮಿತ ಪ್ರಸಾರ
ಜಿಲ್ಲೆಯಲ್ಲಿನ ಹೆದ್ದಾರಿ ಜಾಹಿರಾತು ಫಲಕಗಳಲ್ಲಿ ಮತದಾರರ ಜಾಗೃತಿಗೆ ಜಾಹೀರಾತು ಮಾಹಿತಿ ಅಳವಡಿಸುವುದು.  ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಅಂದರೆ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಮತದಾನ ಪ್ರಮಾಣವಾದ ಗ್ರಾಮಗಳಲ್ಲಿ ಬೀದಿನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ವಾರ್ತಾ ಇಲಾಖೆಯ ಮೂಲಕ ಹಮ್ಮಿಕೊಂಡು, ಮತದಾರರಲ್ಲಿ ಜಾಗೃತಿ ಮೂಡಿಸುವುದು.  ಅಲ್ಲದೆ ಆಟೋ ಮಾಲೀಕರು ಮತ್ತು ಚಾಲಕರ


ಸಹಕಾರದೊಂದಿಗೆ ಹಾಗೂ ಸರ್ಕಾರಿ ಬಸ್‌ಗಳಿಗೆ ಮತದಾರರ ಜಾಗೃತಿಗೆ ಪೋಸ್ಟರ್ ಹಾಕಿಸಿ ಪ್ರಚಾರ ಕೈಗೊಳ್ಳುವಂತಹ ವೈವಿಧ್ಯಮಯ ಕಾರ್ಯಕ್ರಮಗಳನ್ನು ಜಿಲ್ಲಾ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
  ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳು, ಮತದಾರರು, ಸಾರ್ವಜನಿಕರು, ಮಾಧ್ಯಮದವರು ಕೈಜೋಡಿಸಿ, ಮತದಾನದ ಮಹತ್ವದ ಅರಿವನ್ನು ಮತದಾರರಿಗೆ ತಲುಪುವಂತೆ ಮಾಡಲು ಸಹಕರಿಸಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ  ಮನವಿ ಮಾಡಿಕೊಂಡಿದ್ದಾರೆ.

Advertisement

0 comments:

Post a Comment

 
Top