ಕೊಪ್ಪಳ : ಬಳ್ಳಾರಿಯ ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆ ಮತ್ತು ಸಂಸ್ಕೃತಿ ಪ್ರಕಾಶನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂಸ್ಕೃತಿ ಸಂಭ್ರಮ ಹಾಗೂ ಡಾ.ಎಚ್.ಎನ್. ಪ್ರಶಸ್ತಿ, ವೈದ್ಯಸೇವಾ ರತ್ನ, ಭರಣಿಶ್ರೀ ಹಾಗೂ ಡಾ.ಅಂಬೇಡ್ಕರ್ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲಿ ಕನ್ನಡನೆಟ್ ಡಾಟ್ ಕಾಂ ಪತ್ರಿಕೆಯ ಸಂಪಾದಕ ಸಿರಾಜ್ ಬಿಸರಳ್ಳಿಗೆ ೨೦೧೩ನೇ ಸಾಲಿನ ಡಾ.ಅಂಬೇಡ್ಕರ್ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ನಾಡೋಜ ಪ್ರಶಸ್ತಿ ಪುರಸ್ಕೃತರಾದ ದರೋಜಿ ಈರಮ್ಮ, ನಾಡೋಜ ಕಪ್ಪಗಲ್ಲು ಪದ್ಮಮ್ಮ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮವನ್ನು ಚಿತ್ರ ಕಲಾವಿದ ನಾಡೋಜ ಡಾ.ವಿ.ಟಿ.ಕಾಳೆ ಉದ್ಘಾಟಿಸಿದರು.ಕರ್ನಾಟಕ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ, ವಿದ್ವಾಂಸ ಡಾ.ಸಿ.ವೀರಣ್ಣ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ ಎಚ್.ಎನ್. ಪ್ರಶಸ್ತಿ ಸ್ವೀಕರಿಸಿ ಪುರಸ್ಕೃತರ ಪರವಾಗಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಎಚ್.ಟಿ.ಪೋತೆ ಮಾತನಾಡಿದರು. ಕರ್ನಾಟಕ ವಿ.ವಿ. ಪ್ರಾಧ್ಯಾಪಕ ಪ್ರೊ.ಅರವಿಂದ ಮೂಲಿಮನಿ ಆಶಯ ನುಡಿಗಳನ್ನಾಡಿದರು. ವೇದಿಕೆಯ ಮೇಲೆ ಬಳ್ಳಾರಿ ಜಿಲ್ಲಾ ಡಾ. ಬಿ ಆರ್ ಅಂಬೇಡ್ಕರ್ ಸಂಘದ ಅಧ್ಯಕ್ಷ ಯರಕುಲಸ್ವಾಮಿ, ಭಾರತೀಯ ಬೌದ್ಧ ಮಹಾಸಭಾದ ರಾಜ್ಯಾಧ್ಯಕ್ಷ ಡಾ.ವೆಂಕಟಯ್ಯ ಅಪ್ಪಗೆರೆ, ಛಲವಾದಿ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ಜಿಂದಾಲ್ ಕೆ. ತಿಪ್ಪೇಸ್ವಾಮಿ ಮತ್ತಿತರರು ಹಾಜರಿದ್ದರು. ಆರಂಭದಲ್ಲಿ ಚಿನ್ಮಯ ನಾಡಗೀತೆ ಹಾಡಿದರು. ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ, ಪತ್ರಕರ್ತ ಸಿ.ಮಂಜುನಾಥ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಾಪಕ ಸಯ್ಯದ್ ಹುಸೇನ್, ವಿನೋದ್ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಕೂಡ್ಲಿಗಿ ಬಿಆರ್‌ಸಿ ಮೈಲೇಶಿ ವಂದಿಸಿದರು.

0 comments:
Post a Comment