ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮಾ.೨೮ ರಿಂದ ಏ.೦೯ ರವರೆಗೆ ಜಿಲ್ಲೆಯ ೬೨ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಯಲು ಅನುಕೂಲವಾಗುವಂತೆ ಮಾ.೨೮ ರಿಂದ ಏ.೦೯ ರವರೆಗೆ ಬೆಳಿಗ್ಗೆ ೯.೦೦ ರಿಂದ ಮಧ್ಯಾಹ್ನ ೧.೦೦ ಗಂಟೆಯವರೆಗೆ ಸಿ.ಆರ್.ಪಿ.ಸಿ. ಕಲಂ ೧೪೪ರ ಅನ್ವಯ ನಿಷೇಧಾಜ್ಞೆಯನ್ನು ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದೆ. ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಪರೀಕ್ಷಾ ಸಮಯದಲ್ಲಿ ಎಸ್.ಟಿ.ಡಿ., ಮೊಬೈಲ್ ಪೇಜರ್, ಜಿರಾಕ್ಸ್, ಟೈಪಿಂಗ್ ಮುಂತಾದ ಕೇಂದ್ರಗಳನ್ನು ನಿಷೇಧಿಸಿದೆ. ಸಾರ್ವಜನಿಕರು ಯಾವುದೇ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವುದು ನಿಷೇಧಿಸಲಾಗಿದೆ. ಮದುವೆ, ಶವ ಸಂಸ್ಕಾರ, ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
0 comments:
Post a Comment