ಕರ್ನಾಟಕದ ೨೮ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ ೧೭ ರ ಗುರುವಾರ ದಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಎಲ್ಲಾ ಮತದಾರರು ಪಾಲ್ಗೊಂಡು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲ ನೌಕರರಿಗೆ ವೇತನ ಸಹಿತ ರಜೆ ನೀಡುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಲೋಕಸಭಾ ಕ್ಷೇತ್ರಗಳಲ್ಲಿನ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸ್ವಾಮ್ಯಕ್ಕೆ ಒಳಪಟ್ಟ ಸಂಸ್ಥೆಗಳು, ಸರ್ಕಾರಿ ಹಾಗೂ ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಿಸಿದೆ. ಅಲ್ಲದೆ ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಉದ್ಯಮಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ನೆಗೋಷಿಯಬಲ್ ಇನ್ಸ್‌ಟ್ರುಮೆಂಟ್ಸ್ ಆಕ್ಟ್ ಮತ್ತು ಜನಪ್ರತಿನಿಧಿ ಕಾಯ್ದೆ ೧೯೫೧ ಕಾಲಂ ೧೩೫ ಬಿ ಅಡಿಯಲ್ಲಿ ವೇತನ ಸಹಿತ ರಜೆ ನೀಡುವಂತೆ ಆದೇಶ ಹೊರಡಿಸಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಸೂಚನೆ ಹೊರಡಿಸಿದೆ.
0 comments:
Post a Comment