PLEASE LOGIN TO KANNADANET.COM FOR REGULAR NEWS-UPDATES

 ಜಿಲ್ಲೆಯಲ್ಲಿ ಮೇ.೦೧ ರಿಂದ ಮೇ.೦೨ ರವರೆಗೆ ಎರಡು ದಿನಗಳ ಕಾಲ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಪರೀಕ್ಷೆಯನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಬೆಳಿಗ್ಗೆ ೮.೦೦ ಗಂಟೆಯಿಂದ ಸಂಜೆ ೫.೦೦ ರವರೆಗೆ ಜಿಲ್ಲೆಯ ೦೨ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರೀಯೆ ಸಂಹಿತೆ ೧೯೭೩ ರ ಕಲಂ ೧೪೪ ರನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಅಪರ ಜಿಲ್ಲಾಧಿಕಾರಿ ಡಾ|| ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
ಸಿಇಟಿ ಪರೀಕ್ಷೆ ಕೊಪ್ಪಳದ ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಜರುಗಲಿದೆ.  ಪರೀಕ್ಷೆ ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಗೆ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. 
ನಿಷೇಧಾಜ್ಞೆ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಜಿರಾಕ್ಸ್, ಟೈಪಿಂಗ್ ಹಾಗೂ ೨೦೦ ಮೀ.ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಡಾ|| ಸುರೇಶ ಬಿ.ಇಟ್ನಾಳ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Advertisement

0 comments:

Post a Comment

 
Top