ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೂ ಪೂರ್ವದಲ್ಲಿ ನಡೆಸಲಾಗುವ ’ಶಿಕ್ಷಕರ ಅರ್ಹತಾ ಪರೀಕ್ಷೆ’ ಕುರಿತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ತಾಂತ್ರಿಕ ತೊಂದರೆ ಅಥವಾ ಸಮಸ್ಯೆಗಳ ನಿವಾರಣೆಗಾಗಿ ಸಹಾಯವಾಣಿ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಎ. ಶ್ಯಾಮಸುಂದರ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಪೂರ್ವದಲ್ಲಿ ಎನ್.ಸಿ.ಟಿ.ಇ. ಮಾರ್ಗಸೂಚಿಯಲ್ಲಿನ ನಿರ್ದೇಶನದಂತೆ ಹಾಗೂ ಆರ್.ಟಿ.ಇ. ಕಾಯ್ದೆಯನ್ವಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಜೂನ್ ೦೧ ರಂದು ನಡೆಸಲು ದಿನಾಂಕ ನಿಗದಿಯಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ.೦೩ ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ತಾಂತ್ರಿಕ ತೊಂದರೆ ಅಥವಾ ಸಮಸ್ಯೆಗಳಿದ್ದರೆ ಸಹಾಯವಾಣಿ ೮೯೦೪೭೭೯೫೦೮ ಹಾಗೂ ೮೯೦೪೭೬೫೫೩೭ ಈ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ. ಅಥವಾ ಇಲಾಖೆಯ ವೆಬ್‌ಸೈಟ್ ವಿಳಾಸ www.schooleducation.kar.nic.in ರ ಮೂಲಕ ಅವಲೋಕಿಸಬಹುದಾಗಿದೆ .
0 comments:
Post a Comment