PLEASE LOGIN TO KANNADANET.COM FOR REGULAR NEWS-UPDATES

  ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳ ಮೌಲ್ಯ ಮಾಪನ ಏ.೧೦ ರಿಂದ ೨೬ ರವರೆಗೆ ನಡೆಯಲಿದ್ದು, ಮೌಲ್ಯಮಾಪನ ಸುವ್ಯವಸ್ಥಿತವಾಗಿ ನಡೆಯುವ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಒಟ್ಟು ೬ ಮೌಲ್ಯ ಮಾಪನ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಬೆಳಿಗ್ಗೆ ೯.೦೦ ರಿಂದ ಸಂಜೆ ೫.೩೦ ರವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ೧೪೪ ಕಲಂ ಅನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಮೌಲ್ಯ ಮಾಪನ ಕೇಂದ್ರಗಳಲ್ಲಿ ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮೌಲ್ಯ ಮಾಪನ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಇದರನ್ವಯ ಪ್ರವೇಶ ಪತ್ರ ಹೊಂದಿದ ಶಿಕ್ಷಕರನ್ನು ಹಾಗೂ ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಮೌಲ್ಯ ಮಾಪನ ಕೇಂದ್ರಗಳಲ್ಲಿ ಪ್ರವೇಶವಿಲ್ಲ.  ಅಲ್ಲದೆ ೨೦೦ ಮೀಟರ್ ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

Advertisement

0 comments:

Post a Comment

 
Top