PLEASE LOGIN TO KANNADANET.COM FOR REGULAR NEWS-UPDATES

 ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ೧೦೭ ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾ ಆಡಳಿತದ ಆಡಿಟೋರಿಯಂ ಹಾಲ್‌ನಲ್ಲಿ ಸರಳ, ಸಾಂಕೇತಿಕವಾಗಿ ಆಚರಿಸಲಾಯಿತು.
  ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಜಗಜೀವನರಾಂ ಅವರ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪೂಜೆಯೊಂದಿಗೆ ಪುಷ್ಪ ನಮನ ಸಲ್ಲಿಸಿದರು.  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶುಭಾ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿ, ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Advertisement

0 comments:

Post a Comment

 
Top